ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗುತ್ತಿಲ್ಲ -ನಟಿ ರಾಗಿಣಿ ದ್ವಿವೇದಿ

ಬೆಂಗಳೂರು: ಸಿಸಿಬಿ ಪೊಲೀಸರ ವಿಚಾರಣೆಗೆ ನಾನು ಇಂದು (ಗುರುವಾರ) ಹಾಜರಾಗುತ್ತಿಲ್ಲ ಎಂದು ನಟಿ ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ನಂಟಿನ ಆರೋಪದಡಿ ನಟಿ ರಾಗಿಣಿ ದ್ವಿವೇದಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೆÇಲೀಸರು ನೊಟೀಸ್ ನೀಡಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ನಟಿ ರಾಗಿಣಿ, ನಾನು ಇಂದು (ಗುರುವಾರ) ವಿಚಾರಣೆಗೆ ಹಾಜರಾಗುತ್ತಿಲ್ಲ, ಇದನ್ನು ನಾನು ನನ್ನ ವಕೀಲರ ಮೂಲಕ ಪೆÇಲೀಸರಿಗೆ ತಿಳಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಜವಾಬ್ದಾರಿಯುತ ನಾಗರಿಕಳಾಗಿ ನಾನು ಕಾನೂನು ಮತ್ತು ಅದರ ಪ್ರಕ್ರಿಯೆಯನ್ನು ಗೌರವಿಸುತ್ತೇನೆ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಟ್ವಿಟ್ಟರ್ ನಲ್ಲಿ ರಾಗಿಣಿ ಬರೆದು ಕೊಂಡಿದ್ದಾರೆ.