ಮೈಸೂರು: ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಬಾಗಿನ ಸಮರ್ಪಣೆ ಮಾಡುವ ಮೂಲಕ ಶ್ರೀದುರ್ಗಾ ಫೌಂಡೇಶನ್ ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ.
ಶ್ರೀದುರ್ಗಾ ಫೌಂಡೇಶನ್ ವತಿಯಿಂದ ಆಷಾಡ ಮಾಸದ ಪ್ರಯುಕ್ತ ಪ್ರತಿ ವರ್ಷದಂತೆ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಬಾಗಿನ ಸಮರ್ಪಣೆ ಮಾಡಲಾಯಿತು,
ಈ ವೇಳೆ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ ಪುರಾಣಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಆಷಾಡ ಮಾಸದಲ್ಲಿ ಚಾಮುಂಡಿ ದೇವಿಗೆ ವಿಶೇಷ ಪ್ರಾರ್ಥನೆ ಪೂಜಾ ಕೈಂಕರ್ಯ ಸೇವೆ ಸಲ್ಲಿಸಲು ಮಹಿಳೆಯರು ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ ಎಂದು ಹೇಳಿದರು.
ಪ್ರತಿನಿತ್ಯ ಸೇವೆ ಸಲ್ಲಿಸುವ ಮಹಿಳಾ ಭದ್ರತಾ ಸ್ವಚ್ಛತಾ ಸಿಬ್ಬಂದಿಗಳನ್ನ ಗೌರವಿಸಿ ಬಾಗಿನ ಸಮರ್ಪಣೆ ನೀಡುತ್ತಿರುವುದು ಅರ್ಥಪೂರ್ಣವಾದುದು ಎಂದು ತಿಳಿಸಿದರು.
ಬೆಟ್ಟಕ್ಕೆ ಬರುವ ಭಕ್ತಾಧಿಗಳು ಭಕ್ತಿ ಮನೋಭಾವ ಜೊತೆಯಲ್ಲೆ ಪ್ಲಾಸ್ಟಿಕ್ ಬಳಸದೆ ಪರಿಸರ ಸಂರಕ್ಷಣೆಗೆ ಸಂಕಲ್ಪ ತೊಡಬೇಕು ಎಂದು ಸಲಹೆ ನೀಡಿದರು
ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ಮಾತನಾಡಿ ಮುಂದಿನ ದಿನದಲ್ಲಿ ಮಹಿಳಾ ಸಂಘಟನೆಗಳ ಸಹಯೋಗದೊಂದಿಗೆ ವಿದ್ಯಾರ್ಥಿನಿಯರು ಮತ್ತು ಮಹಿಳಾ ಕಾರ್ಮಿಕರಲ್ಲಿ ಅರಿಶಿನ ಕುಂಕುಮದ ಮಹತ್ವ ಮತ್ತು ಪುರಾಣ ಪ್ರಸಿದ್ಧ ಹಬ್ಬಗಳ ಪರಂಪರೆ ಮತ್ತು ಆಚರಣೆಯ ಮಹತ್ವ, ಸಾಮರಸ್ಯದ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಚಾಮುಂಡಿ ಬೆಟ್ಟದ ಪರಿಸರ ಸೌಂದರ್ಯ ಕಾಪಾಡಲು ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನ ಸಂಪೂರ್ಣ ನಿಷೇಧಿಸಿದೆ ಅದರ ನಿಯಮಗಳನ್ನ ಸಾರ್ವಜನಿಕರು ಪಾಲಿಸಿ ಕೈಜೋಡಿಸಿದರೇ ಮಾತ್ರ ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯವಾಗುತ್ತದೆ ಎಂದು ಹೇಳಿದರು
ಜೀವದಾರ ರಕ್ತ ನಿಧಿ ಕೇಂದ್ರದ ಮುತ್ತಣ್ಣ, ಸಮಾಜಸೇವಕರಾದ ಕುಮಾರ್, ಕೋಲಾರ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಲತಾ ಬಾಯಿ ಮಾಹಡಿಕ್,ಅಂಬಾಭವಾನಿ ಮಹಿಳಾ ಸಮಾಜದ ಅಧ್ಯಕ್ಷೆ ಸವಿತಾ ಘಾಟ್ಕೆ , ಶಿವು, ಶಿಕ್ಷಕರಾದ ದೀಪ ಮತ್ತಿತರರು ಉಪಸ್ಥಿತರಿದ್ದರು.