ಗುರುವಿನ ಅನುಗ್ರಹ ಮುಖ್ಯ -ರಘುರಾಮ್ ವಾಜಪೇಯಿ

ಮೈಸೂರು: ಮಾನವ ಜನ್ಮವನ್ನು ಸದುಪಯೋಗಪಡಿಸಿಕೊಳ್ಳಬೇಕಾದರೆ ಗುರುವಿನ ಅನುಗ್ರಹ ಇರಲೇಬೇಕು ಎಂದು ಹಿರಿಯ ಸಮಾಜ ಸೇವಕರಾದ ಕೆ ರಘುರಾಮ ವಾಜಪೇಯಿ ತಿಳಿಸಿದರು.

ಮೈಸೂರಿನ ರಾಮಾನುಜ ರಸ್ತೆಯಲ್ಲಿ  ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಗುರುಗಳನ್ನು ಸ್ಮರಿಸುವ ಗುರುಪೂರ್ಣಿಮೆ ಪ್ರಯುಕ್ತ ನಡೆದ ಗೋಪೂಜೆ ಹಾಗೂ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮಲ್ಲಿರುವ ಚಂಚಲ ಬುದ್ಧಿ ಹೋಗಲಾಡಿಸಲು ಗುರುಗಳ ಧ್ಯಾನ ಮಾಡುತ್ತಾ ಆತ್ಮ ಚಿಂತನೆಯನ್ನು ಮಾಡಬೇಕು.

ನಮ್ಮ ಸಂಸ್ಕೃತಿಯಲ್ಲಿ ಗುರುವಿನ ಸಂಪ್ರದಾಯಕ್ಕೆ ವಿಶಿಷ್ಟ ಸ್ಥಾನ ಇದೆ,ಗುರು ವ್ಯಕ್ತಿ ಅಲ್ಲ ಶಕ್ತಿ, ಗುರುವಿನ ಸನ್ಮಾರ್ಗದಲ್ಲಿ ನಡೆದು ಉತ್ತಮ ಸಮಾಜ ನಿರ್ಮಿಸಬೇಕು ಎಂದು ಹೇಳಿದರು

ಮೈಸೂರು ಜಿಲ್ಲಾ ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ ಅವರು ಮಾತನಾಡಿ ಭಾರತ ಸಂಸ್ಕೃತಿಯಲ್ಲಿ ಗುರು ಶಿಷ್ಯ ಪರಂಪರೆ ಮಹತ್ವವನ್ನು ಪಡೆದುಕೊಂಡಿದೆ ಎಂದು ತಿಳಿಸಿದರು.

ಜತೆಗೆ ಗುರುವನ್ನು ದೇವರ ಸಮಾನ ಎಂದು ಪೂಜಿಸುವ ಸಂಸ್ಕೃತಿ ನಮ್ಮದಾಗಿದೆ. ಇಂತಹ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಈ ಯುವಕರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷರಾದ ಎಚ್.ಎನ್ ಶ್ರೀಧರ್ ಮೂರ್ತಿ ಮಾತನಾಡಿ,ತಂದೆ-ತಾಯಿ ನಮ್ಮನ್ನು ಹೆತ್ತು ಹೊತ್ತು ಸಲಹಿದರೆ,ನಮ್ಮ ಜನ್ಮ ಸಾರ್ಥಕತೆ ಮಾಡಿಕೊಳ್ಳಲು ಸದ್ಗುರುಗಳು ನಮಗೆ ಮೋಕ್ಷದ ದಾರಿಯನ್ನು ತೋರಿಸುವವರು‌ ಎಂದು ತಿಳಿಸಿದರು.

ವಿಪ್ರ ಮಹಿಳಾ ಸಂಗಮದ ಅಧ್ಯಕ್ಷರಾದ ಡಾ. ಲಕ್ಷ್ಮಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಗೋ ಪರಿವಾರ ಸಂಚಾಲಕರಾದ ರಾಕೇಶ್ ಭಟ್, ವಿನಯ್ ಕಣಗಾಲ್, ಸುಚಿಂದ್ರ, ಮಿರ್ಲೆ ಪನಿಷ್, ನಾಗಶ್ರೀ ಸುಚೀಂದ್ರ, ವಿದ್ಯಾ, ಚಿತ್ರ ಸುಚೀಂದ್ರ, ಶಾರದಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಚಮಯ್ಯ, ಮುಖ್ಯ ಶಿಕ್ಷಕರಾದ ಡಿ. ಶಿವ್ ಸ್ವಾಮಿ ಮತ್ತಿತರರು ಹಾಜರಿದ್ದರು.