ಮೈಸೂರು: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಮೈಸೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.
ತಾಲ್ಲೂಕಿನ ಎಲ್ಲಾ ಹೋಬಳಿಯ ಉಪತಹಸೀಲ್ದಾರರು, ರಾಜಸ್ವ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು
ಈ ಸಂದರ್ಭದಲ್ಲಿ ಆರ್ ಟಿ ಸಿ ಕಾಲಂ 3 ಮತ್ತು 9 ರಲ್ಲಿರುವ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರಗತಿ ಕುಂಠಿತವಾಗಿರುವುದನ್ನು ಗಮನಿಸಿ ತಕ್ಷಣ ಸರಿಪಡಿಸಲು ಸೂಚನೆ ನೀಡಿದರು.
ತಾಲ್ಲೂಕು ಕಚೇರಿಯಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಠಾನಗೊಳಿಸವಂತೆ ಸಲಹೆ ನೀಡಿದರು.
ಗ್ರಾಮಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸ್ಮಶಾನ ಜಮೀನುಗಳು ಲಭ್ಯವಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಜಮೀನು ಅವಶ್ಯವಿದ್ದಲ್ಲಿ ಸರ್ಕಾರಿ ಜಮೀನುಗಳನ್ನು ಕಾಯ್ದಿರಿಸುವ ದಿಸೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದ ಪಕ್ಷದಲ್ಲಿ ಖಾಸಗಿ ಜಮೀನನ್ನು ಖರೀದಿಸಲು ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು.
ಅಟಲ್ ಜೀ ಜನ ಸ್ನೇಹಿ ಕೇಂದ್ರದಲ್ಲಿ ಸ್ವೀಕರಿಸುತ್ತಿರುವ ಅರ್ಜಿಗಳನ್ನು 7 ದಿವಸದೊಳಗೆ ಕಾನೂನು ಪ್ರಕಾರ ವಿಲೇವಾರಿ ಮಾಡುವಂತೆ ತಿಳಿಸಿದರು.
ಕಚೇರಿಗೆ ಹಾಜರಾಗುವ ಸಾರ್ವಜನಿಕರೊಂದಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅವರ ಕೆಲಸಗಳನ್ನು ಕಾನೂನು ಚೌಕಟ್ಟಿನಲ್ಲಿ ವಿಳಂಬ ಮಾಡದೆ ಮಾಡಿಕೊಡಲು ಡಿಸಿ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗಿರೀಶ್ ಹಾಗೂ ತಾಲ್ಲೂಕು ಕಚೇರಿಯ ಸಿಬ್ಬಂದಿಗಳು ಉಪಸ್ಧಿತರಿದ್ದರು.