ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಎರಡು ದಿನಗಳ ಕಾಲ ಪತ್ರಕರ್ತರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಮೈಸೂರು ವಿವಿ ಸ್ಪೋರ್ಟ್ಸ್ ಪೆವಿಲಿಯನ್ ಕ್ರೀಡಾಂಗಣದಲ್ಲಿ ಶನಿವಾರ ಮತ್ತು ಭಾನುವಾರ ನಡೆದ ಕ್ರೀಡಾಕೂಟದಲ್ಲಿ ಪತ್ರಕರ್ತರು ಹಾಗೂ ಪತ್ರಕರ್ತರ ಕುಟುಂಬದವರು ಪಾಲ್ಗೊಂಡು ಸಂಭ್ರಮಿಸಿದರು.
ಶನಿವಾರ ಈ ಕ್ರೀಡಾಕೂಟಕ್ಕೆ ಶಾಸಕ ಶ್ರೀವತ್ಸ ಚಾಲನೆ ನೀಡಿದ್ದರು. ಶನಿವಾರ ಕ್ರಿಕೆಟ್ ಪಂದ್ಯಾವಳಿ ನಡೆಯಿತು.
ಭಾನುವಾರ ಪತ್ರಕರ್ತರ ಕುಟುಂಬದವರು ಅದರಲ್ಲೂ ಮಕ್ಕಳು ಪಾಲ್ಗೊಂಡು ಖುಷಿ ಪಟ್ಟರು.
ಭಾನುವಾರ ಮಕ್ಕಳಿಗಾಗಿ ಮ್ಯೂಸಿಕಲ್ ಚೇರ್, ಲೆಮನ್ ಅಂಡ್ ಸ್ಪೂನ್, ರನ್ನಿಂಗ್ ರೇಸ್ ಸೇರಿದಂತೆ ವಿವಿಧ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಯಿತು.
ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೂತ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮತ್ತಿತರರು ಭಾನುವಾರದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.