ಬೆಂಗಳೂರಲ್ಲಿ ಶಂಕಿತ ಉಗ್ರರ ಬಂಧನ: ಸಾಂಸ್ಕೃತಿಕ ನಗರಿಯಲ್ಲೂ‌ ಹೈ ಅಲರ್ಟ್

ಮೈಸೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನವಾಗುತ್ತಿದ್ದಂತೆ

ಮೈಸೂರಿನಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ.

ಬಸ್ ನಿಲ್ದಾಣ ಸೇರಿದಂತೆ ಹಲವು ಕಡೆ ನಿರಂತರ ಪರಿಶೀಲನೆ ನಡೆಸಲಾಗುತ್ತಿದೆ.

ಅನುಮಾನಾಸ್ಪದ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಲಾಗುತ್ತಿದೆ.ನೈಟ್ ಬೀಟ್ ಗಳನ್ನ ಹೆಚ್ಚಿಸಲಾಗಿದೆ.

ಮೈಸೂರಿನ ಎಲ್ಲಾ ಠಾಣೆಗಳ ಪೊಲೀಸರು ವಿಶೇಷ ಕಾರ್ಯಾಚರಣೆಗೆ ಒತ್ತು ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವರಿಗೂ ಪೊಲೀಸರು ದಂಡ ವಿಧಿಸುತ್ತಿದ್ದಾರೆ.

ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಇನ್ಸ್‌ಪೆಕ್ಟರ್  ಸಂತೋಷ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಯಿತು.

ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಡಿಸಿಪಿ ಮುತ್ತುರಾಜ್ ಸೂಚನೆಯಂತೆ ಕಾರ್ಯಾಚರಣೆ ನಡೆಯುತ್ತಿದೆ.