ಕಬಿನಿ ಜಲಾಶಯ ಭರ್ತಿ: ನದಿ ಪಾತ್ರದ ಜನತೆಗೆ ಎಚ್ಚರಿಕೆ

ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯ ಭರ್ತಿಗೆ ಕೇವಲ 2 ಅಡಿ ಮಾತ್ರ ಬಾಕಿ ಇದ್ದು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಕೇರಳದ ವೈಯಾನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯಭರ್ತಿಯಾಗುತ್ತಿದೆ.

ಕಬಿನಿ ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯವೆಂಬ ಖ್ಯಾತಿ ಪಡೆದಿದೆ.

ಜಲಾಶಯದ ಗರಿಷ್ಠ ಮಟ್ಟ 2284.00 ಅಡಿ.

ಇಂದಿನ ಮಟ್ಟ 2280.51 ಅಡಿ(2283.82).

ಒಳಹರಿವು 25896 ಕ್ಯೂಸೆಕ್ಸ್.ಹೊರ ಹರಿವು  15000 ಕ್ಯೂಸೆಕ್ಸ್.

ಕಪಿಲಾ ನದಿ ಮೈದುಂಬಿ ಹರಿಯುತ್ತಿರುವುದರಿಂದ ನದಿ ಪಾತ್ರದ ಜನರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.

ಯಾವ ಸಮಯದಲ್ಲಾದರೂ ಜಲಾಶಯದಿಂದ ನೀರನ್ನು‌ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ಹರಿಸಲಾಗುವುದರಿಂದ ತಗ್ಗು ಪ್ರದೇಶದಿಂದ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು‌ ಜನರಿಗೆ ಜಿಲ್ಲಾಡಳಿತ ಸಲಹೆ ನೀಡಿದೆ.