ಮೈಸೂರು: ಕಾಂಪೌಂಡ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರನ್ನ ಹೊರತರಲು ಯತ್ನಿಸಿದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಅಶೋಕಾ ಪುರಂ ನಿವಾಸಿಗಳಾದ ಕಿರಣ್ ಹಾಗೂ ರವಿಕುಮಾರ್ ಮೃತ ದುರ್ದೈವಿಗಳು.
ಯುವಕರ ಸಹಾಯಕ್ಕೆ ಬಂದ ರವಿ,ಸಂದೇಶ್,ಶಿವಕುಮಾರ್ ವಿದ್ಯುತ್ ಶಾಕ್ ನಿಂದ ಗಾಯಗೊಂಡಿದ್ದು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುವಾರ ತಡರಾತ್ರಿ ಮಾನಂದವಾಡಿ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.
ಸಂಸದ ಶ್ರೀನಿವಾಸ್ ಪ್ರಸಾದ್ ರವರ ಸಂಬಂಧಿಕರಿಗೆ ಸೇರಿದ ಇನೋವಾ ಕಾರನ್ನ ಟ್ರಯಲ್ ನೋಡುವುದಾಗಿ ರವಿಕುಮಾರ್ ಪಡೆದಿದ್ದಾರೆ.
ಮಾನಂದವಾಡಿ ರಸ್ತೆಯಲ್ಲಿ ರವಿಕುಮಾರ್,ಭಾಸ್ಕರ್,ರವಿ,ಸಂದೇಶ್ ಹಾಗೂ ಶಿವಕುಮಾರ್ ಆಶೋಕಾಪುರಂ ನತ್ತ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಢಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಗುದ್ದಿದೆ.
ಕಾಂಪೌಂಡ್ ಹಾಗೂ ಕಂಬದ ನಡುವೆ ಸಿಲುಕಿದ ಕಾರನ್ನ ಹೊರತರಲು ಯತ್ನಿಸಿದ್ದಾರೆ.
ಈ ವೇಳೆ ಆಟೋದಲ್ಲಿ ಬರುತ್ತಿದ್ದ ಡ್ರೈವರ್ ಕಿರಣ್ ಕುಮಾರ್ ನೆರವಿಗೆ ಬಂದಿದ್ದಾರೆ.
ಹೈವೋಲ್ಟೇಜ್ ತಂತಿ ಸಂಪರ್ಕ ಸಾಧಿಸಿದ ಪರಿಣಾಮ ರವಿಕುಮಾರ್ ಕುಸಿದುಬಿದ್ದಿದ್ದಾರೆ.ನೆರವಿಗೆ ಬಂದ ಆಟೋಡ್ರೈವರ್ ಕಿರಣ್ ಕೂಡಾ ಮೃತಪಟ್ಟಿದ್ದಾರೆ.
ಇವರಿಬ್ಬರ ನೆರವಿಗೆ ಬಂದ ರವಿ,ಸಂದೇಶ್,ಶಿವಕುಮಾರ್ ಗೂ ವಿದ್ಯುತ್ ತಗುಲಿದೆ,ಭಾಸ್ಕರ್ ಅವಘಢದಿಂದ ಪಾರಾಗಿದ್ದಾರೆ.
ಕೆ.ಆರ್ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.