ನವದೆಹಲಿ: ಭ್ರಷ್ಟಚಾರ ಪ್ರಕರಣದ ತನಿಖೆ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮತ್ತೆ ರಿಲೀಫ್ ಸಿಕ್ಕಿದೆ.
ರಾಜ್ಯ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆ ಆದೇಶದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು.
ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ತನಿಖಾಧಿಕಾರಿಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಸಿಬಿಐ ತನಿಖೆಗೆ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆ ಆದೇಶವನ್ನು ರದ್ದು ಮಾಡಲು ನಿರಾಕರಿಸಿದೆ,ಅಲ್ಲದೆ ಸಿಬಿಐ ಅಧಿಕಾರಿಗಳ ಮೇಲ್ಮನವಿ ಅರ್ಜಿಯನ್ನೂ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
2018ರವರೆಗಿನ ಡಿ.ಕೆ ಶಿವಕುಮಾರ್ ಅವರ ಆದಾಯ ಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿತ್ತು.
ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆಯನ್ನು ನ್ಯಾಯಾಲಯ ಸೋಮವಾರ ನಡೆಸಿತು
ಆದಾಯಕ್ಕಿಂತ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.
ಸರ್ಕಾರದ ಈ ನಿರ್ಧಾರ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಅದನ್ನು ಪ್ರಶ್ನಿಸಿ ಡಿಕೆಶಿ ಮತ್ತೆ ಮೇಲ್ಮನವಿ ಸಲ್ಲಿಸಿದ್ದರು. ಆಗ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ನ್ಯಾಯಪೀಠ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸುವ ಮೂಲಕ ರಿಲೀಫ್ ನೀಡಿತ್ತು.
ಇದೀಗ ಸುಪ್ರೀಂ ಕೋರ್ಟ್ ಸಿಬಿಐ ಮನವಿ ಅರ್ಜಿಯನ್ನು ವಜಾಗೊಳಿಸುವ ಮೂಲಕ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.