ಮೈಸೂರು: ಅಪಘಾತದಲ್ಲಿ ಗಾಯಗೊಂಡಿದ್ದ ಬಾಲಕಿ ಹಾಗೂ ಮಹಿಳೆಯನ್ನು ಮೈಸೂರಿನ ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಅವರು ಆಸ್ಪತ್ರೆಗೆ ರವಾನಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಹಾಗೂ ಬಾಲಕಿಗೆ ಮೈಸೂರಿನ ಸಿದ್ದಪ್ಪ ಸ್ಕ್ವೇರ್ ನಲ್ಲಿ
ವಾಹನವೊಂದು ಢಿಕ್ಕಿ ಹೊಡೆದಿದ್ದು,ಇಬ್ಬರೂ ಗಾಯಗೊಂಡಿದ್ದಾರೆ.
ಆಗ ಇದೇ ಮಾರ್ಗದಲ್ಲಿ ಬರುತ್ತಿದ್ದ ಶಾಸಕ ಶ್ರೀವತ್ಸ ಅವರು ತಕ್ಷಣ ಗಾಯಾಳುಗಳ ನೆರವಿಗೆ ಬಂದಿದ್ದಾರೆ.
ಗಾಯಾಳುಗಳನ್ನ ಆಟೋದಲ್ಲಿ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.ಶ್ರೀವತ್ಸ ಅವರ ಈ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ