ಮೈಸೂರು: ಮೈಸೂರು ನಗರದಲ್ಲಿ ಗಾಂಜಾ ಮಾರಾಟ ಕಂಡುಬಂದಲ್ಲಿ ಆಯಾ ವ್ಯಾಪ್ತಿಯ ಪೆÇಲೀಸ್ ಠಾಣೆ ಅಧಿಕಾರಿಗಳು ಜವಾಬ್ದಾರರಾಗಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು.
ನಗರದಲ್ಲಿ ಶನಿವಾರ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಡ್ರಗ್ಸ್ ದಂಧೆಯಲ್ಲಿ ನಂಟು ಹೊಂದಿರುವ ರಾಜಕೀಯದವರಾಗಲಿ, ಸಿನಿಮಾ ನಟರಾಗಲಿ, ಉದ್ಯಮಿಗಳ ಮಕ್ಕಳಾಗಲಿ, ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ದಸರಾ ಆಚರಣೆ ಬಗ್ಗೆ ಸೆ. 8ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಸಲಾಗುವುದು. ನಂತರ ಮೈಸೂರಿನಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಇಲ್ಲಿ ತೆಗೆದುಕೊಳ್ಳುವ ನಿರ್ಣಯದ ಮೇರೆಗೆ ದಸರಾವನ್ನು ಆಚರಿಸಲಾಗುವುದು ಎಂದು ಹೇಳಿದರು.