ಮಾಜಿ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಮೈಸೂರಿನ ದೇವರಾಜ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಖಿಲ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಸಂಘದ ಅಧ್ಯಕ್ಷ ನರೇಂದ್ರ ಸಿ ಎಂಬುವವರು ದೂರು ದಾಖಲಿಸಿದ್ದಾರೆ.

ವಿವಿಧ ದಲಿತಪರ ಸಂಘಟನೆಗಳ ಮುಖಂಡರೊಂದಿಗೆ ದೇವರಾಜ ಪೋಲಿಸ್ ಠಾಣೆಗೆ ತೆರಳಿ ದೂರು ದಾಖಲಿಸಿದರು.

ಈ‌ ವೇಳೆ ಮಾತನಾಡಿದ ನರೇಂದ್ರ,ರಾಷ್ಟ್ರಮಟ್ಟದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣ ಕುರಿತು ಆರಗ ಜ್ಞಾನೇಂದ್ರ ಕೀಳಾಗಿ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.

ಇದು ದಲಿತ ಸಮುದಾಯಕ್ಕೆ ಮಾಡಿರುವ ಅಪಮಾನ.ಇದು ಬಿಜೆಪಿ ಅವರ ಮನಸ್ಥಿತಿ ಎಂಥದ್ದು ಎಂದು ತೋರುತ್ತದೆ.

ಈ ಕೂಡಲೇ ಅರಗ ಜ್ಞಾನೇಂದ್ರ ಅವರ ಮೇಲೆ ಜಾತಿ ನಿಂದನೆ ಕೇಸ್ ದಾಖಲಿಸಿ ಕೂಡಲೆ ಬಂಧಿಸಬೇಕು ಎಂದು ಒತ್ತಾಯಿಸಿದರು.

ತಕ್ಷಣ ರಾಜ್ಯದ ಜನರಲ್ಲಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.