ಮೈಸೂರು: ಮೈಸೂರು ಜಿಲ್ಲಾ ಪೋಲೀಸರು ಭರ್ಜರಿ ಭೇಟೆಯಾಡಿದ್ದು, ವಿವಿಧ ಪ್ರಕರಣಗಳಲ್ಲಿ ಕೋಟ್ಯಂತರ ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಒಟ್ಟು 63ಪ್ರಕರಣಗಳಲ್ಲಿ 1ಕೋಟಿಗೂ ಅಧಿಕ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಶನಿವಾರ ಮೈಸೂರು ನಗರದ ಡಿಎಆರ್ ಮೈದಾನದಲ್ಲಿ ವಶಪಡಿಸಿಕೊಂಡಿದ್ದ ಸ್ವತ್ತುಗಳನ್ನು ಇಟ್ಟು ವಾರಸುದಾರರಿಗೆ ಪೊಲೀಸರು ಹಸ್ತಾಂತರಿಸಿದರು
ಕೊಲೆ, ದರೋಡೆ, ಸುಲಿಗೆ, ಸರಗಳ್ಳತನ, ವಾಹನ ಕಳ್ಳತನ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ವಸ್ತುಗಳನ್ನು ಡಿಐಜಿ ಬೋರಲಿಂಗಯ್ಯ ನೇತೃತ್ವದಲ್ಲಿ ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು.