ಮಂಡ್ಯ: ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿಗೆ ಮೊದಲ ಸ್ಥಾನ ಎಂದು ಮಾಜಿ ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಧಿಕಾರ ಸಿಕ್ಕಾಗ ಜನಗಳಿಗೆ ಒಳ್ಳೆಯದು ಮಾಡಬೇಕು,ಆದರೆ ಇವರು ಲೂಟಿ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಅಧಿಕಾರಿಗಳ ವರ್ಗಾವಣೆಯಲ್ಲಿ 150 ಕೋಟಿ ರೂ., ಜಲಧಾರೆ ಯೋಜನೆ 100 ಕೋಟಿ ರೂ., ಅಧಿಕಾರಿಗಳ ಬಳಿ ಲೂಟಿ ಹೀಗೆ 300 ಕೋಟಿ ರೂ. ಚಲುವರಾಯಸ್ವಾಮಿ ಲೂಟಿ ಹೊಡೆದಿದ್ದಾರೆ ಎಂದು ದೂರಿದರು.
ಹಿಂದಿನ ಸರ್ಕಾರ ಜೆಸಿಬಿಯಲ್ಲಿ ಹಣ ತುಂಬುತ್ತಿದೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದರು ಆದರೆ ಈ ಸರ್ಕಾರ ಭ್ರಷ್ಟ ಹಣವನ್ನು ಏರ್‌ಲಿಫ್ಟ್ ಮಾಡುತ್ತಿದೆ. ಇವರು ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ನಮ್ಮ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೇ ನಾವು ಸುಮ್ಮನಿರುವುದಿಲ್ಲ. ಚಲುವರಾಯಸ್ವಾಮಿಯನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಮಾಡಿದ್ದು ಜೆಡಿಎಸ್,ಶಾಸಕ, ಸಚಿವ, ಎಂಪಿಯನ್ನಾಗಿ ಮಾಡಿದ್ದು ಜೆಡಿಎಸ್ ಪಕ್ಷ ಅದು ತಿಳಿದಿರಲಿ ಎಂದರು.
ಅಧಿಕಾರಗಳು ಪತ್ರ ಬರೆದದ್ದು ಸತ್ಯ, ಬೆಂಗಳೂರಿನ ಹೋಟೆಲ್‌ಗೆ ಅಧಿಕಾರಿಗಳನ್ನು ಕರೆಸಿಕೊಂಡು ಒತ್ತಡ ಹೇರಿದ್ದಾರೆ ಅದೂ ನಿಜ ಎಂದು ಸುರೇಶ್ ಗೌಡ ಹೇಳಿದರು.