ಚಾಮುಂಡಿ ಬೆಟ್ಟದಲ್ಲಿ‌ ಪ್ಲಾಸ್ಟಿಕ್ ಬಿಸಾಡಿದರೆ 500 ರೂ. ದಂಡ

ಮೈಸೂರು: ಚಾಮುಂಡಿಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ಪ್ಲಾಸ್ಟಿಕ್ ಬಿಸಾಡಿದರೆ 500 ರೂ ದಂಡ ವಿಧಿಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ

ಈ ಬಗ್ಗೆ ಚಾಮುಂಡಿಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ದಂಡ, ಎರಡನೇ ಬಾರಿಗೆ 5 ಸಾವಿರ ಹಾಗೂ ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಅರಣ್ಯದ ಒಳಗೆ ತೆರಳಿದರೆ 500 ದಂಡ, ನಿರ್ಬಂಧಿತ ಪ್ರದೇಶದಲ್ಲಿ ವಾಹನ ನಿಲುಗಡೆ ಮಾಡಿದರೆ 1 ಸಾವಿರ ರೂ ದಂಡ ವಿಧಿಸಲಾಗುತ್ತದೆ. 

ಸೆಪ್ಟೆಂಬರ್ 1 ರಿಂದ ಇದು ಜಾರಿಯಾಗಲಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.