ಮೈಸೂರು:ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದ್ದು, ಕಾರ್ಯಕ್ರಮ ಆಯೋಜನೆಗೆ ನಿಗದಿಯಾಗಿರುವ ಸ್ಥಳವನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಕಾರ್ಯಕ್ರಮ ನಡೆಯುವ ಮಹಾರಾಜ ಕಾಲೇಜು ಮೈದಾನಕ್ಕೆ ಮಂಗಳವಾರ ಭೇಟಿ ನೀಡಿ ಅಗತ್ಯ ಸಿದ್ಧತೆ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಡಾ.ರಾಜೇಂದ್ರ ಅವರು, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಮಡಿಕೇರಿ ಜಿಲ್ಲೆಗಳಿಂದ 1.5 ಲಕ್ಷ ಫಲಾನುಭವಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಧೆ ಮಾಡಬೇಕು, ಕಾರ್ಯಕ್ರಮಕ್ಕೆ ವ್ಯವಸ್ಧಿತವಾದ ಆಸನದ ವ್ಯವಸ್ಧೆ, ಊಟದ ವ್ಯವಸ್ಧೆ,ಕುಡಿಯುವ ನೀರಿನ ವ್ಯವಸ್ಧೆ ಸಮರ್ಪಕವಾಗಿ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ವೇದಿಕೆ ನಿರ್ಮಾಣ, ಮೊಬೈಲ್ ಶೌಚಾಲಯ, ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ವ್ಯವಸ್ಧೆ ಹಾಗೂ ವೈದ್ಯರ ತಂಡ ನಿಯೋಜಿಲಾಗುವುದು ಎಂದು ಹೇಳಿದರು.
ಸ್ಥಳ ಪರಿಶೀಲನೆ ವೇಳೆ ಮಹಾನಗರ ಪಾಲಿಕೆ ಆಯುಕ್ತ ಅರ್ಷದ್ ಉರ್ ರೆಹಮಾನ್ ಷರೀಫ್, ಮೂಡಾ ಆಯುಕ್ತ ದಿನೇಶ್ ಕುಮಾರ್, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.