ಮೈಸೂರು: ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಮತ್ತು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ಆಗಸ್ಟ್ 28 ರಿಂದ 30 ರವರೆಗೆ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸೂಚಿಸಿದ್ದಾರೆ.
ಭಾನುವಾರದಿಂದ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 27 ರಿಂದ 30 ರ ತನಕ ಮೈಸೂರು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸೋಮವಾರ ಮೈಸೂರಿನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ. ಆ.30ರಂದು ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ಆದ್ದರಿಂದ 28 ರಿಂದ 30 ರ ತನಕ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಅನಿವಾರ್ಯ ಕಾರಣಕ್ಕೆ ರಜೆ ಬೇಕಾದಲ್ಲಿ ಜಿ.ಪಂ ಸಿಇಒ ಮತ್ತು ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆಯಬೇಕೆಂದು ಡಿಸಿ ತಿಳಿಸಿದ್ದಾರೆ.