ಮೈಸೂರಿನಲ್ಲಿ ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ನಗರದ ಚಾಮುಂಡಿಪುರಂನಲ್ಲಿ ಈ ಘಟನೆ
ನಡೆದಿದ್ದು,ಪತಿ,ಪತ್ನಿ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.

ಒಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಉಳಿದ ಮೂರು ಶವಗಳು ಮನೆಯ ಹಾಲ್ ನಲ್ಲಿ ಕಂಡು ಬಂದಿದೆ.

ಸ್ಥಳಕ್ಕೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹಾಗೂ ಡಿಸಿಪಿಗಳಾದ ಮುತ್ತುರಾಜ್ ಮತ್ತು ಜಾಹ್ನವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆರ್.ಎಂ.ಸಿ.ಯಲ್ಲಿ ಕಮಿಷನ್ ಏಜೆಂಟ್ ಆಗಿದ್ದ ಮಹದೇವಸ್ವಾಮಿ ಮತ್ತು ಅನಿತಾ ದಂಪತಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ದೊಡ್ಡ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ,ಅನಿತಾ ಮೃತದೇಹ ಕುರ್ಚಿ ಮೇಲೆ, ಚಿಕ್ಕ ಮಗಳು ಕೊಠಡಿಯಲ್ಲಿ, ಮಹದೇವ ಸ್ವಾಮಿ ದೇಹ ಹಾಲ್‌ನಲ್ಲಿ ಪತ್ತೆಯಾಗಿವೆ.

ಮಹದೇವ‌ ಸ್ವಾಮಿ ಬಂಡಿಪಾಳ್ಯದಲ್ಲಿ ಮಳಿಗೆ ಹೊಂದಿದ್ದರು,ಅದೇನಾಯಿತು ತಿಳಿಯದು,ಆತ್ಮಹತ್ಯೆಗೆ ಕಾರಣ‌ ತಿಳಿದು ಬಂದಿಲ್ಲ.ಸಧ್ಯಕ್ಕೆ‌ ಆರ್ಥಿಕ ಸಮಸ್ಯೆಯೇ ಕಾರಣ ಎಂದು ಹೇಳಲಾಗುತ್ತಿದೆ.

ಇವರ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಜತೆಗೆ ಮನೆಯವರು ಯಾರೂ ಹೊರಗೆ ಬಾರದ ಕಾರಣ ಅನುಮಾನ ಕೂಡಾ ಇತ್ತು.

ಪೊಲೀಸರು ಬಂದು ಬಾಗಿಲು ತೆಗೆಸಿ ನೋಡಿದಾಗ ನಾಲ್ಕೂ ಮಂದಿ ಮೃತಪಟ್ಟಿರುವುದು ಗೊತ್ತಾಗಿದೆ.

ಕೆ.ಆರ್.ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.