ಸೆ. 5ರಂದು ಅರಮೆನೆಗೆ ಗಜಪಡೆಗೆ ಸ್ವಾಗತ ಕಾರ್ಯಕ್ರಮ

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ನಾಡಹಬ್ಬ ದಸರಾ -2023 ರ ಅಂಗವಾಗಿ ಅರಮನೆಗೆ ಅಗಮಿಸುತ್ತಿರುವ ಗಜಪಡೆಗೆ ಸ್ವಾಗತ ಕಾರ್ಯಕ್ರಮವನ್ನು ಸೆಪ್ಟೆಂಬರ್ 05 ರಂದು ಮಾಧ್ಯಾಹ್ನ 12.01 ರಿಂದ 12.51 ರ ಅಭಿಜಿನ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಹಮ್ಮಿಕೊಳ್ಳಾಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ವಿದ್ಯುಕ್ತ ಚಾಲನೆ ನೀಡುವರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ಕ್ಷೇತದ್ರ ಟಿ.ಎಸ್. ಶ್ರೀವತ್ಸ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ್ ಪ್ರಸಾದ್ ಹಾಗೂ ಸುಮಲತಾ ಅಂಬರೀಶ್ ಅವರು ಭಾಗವಹಿಸಲಿದ್ದಾರೆ.