ಸನಾತನ ಎಂದರೆ ಶಾಶ್ವತ: ನಿರ್ಮಲಾನಂದನಾಥ ಶ್ರೀಗಳ ವ್ಯಾಖ್ಯಾನ

ಮೈಸೂರು: ಸನಾತನ ಎಂಬ ಪದಕ್ಕೆ ಇಂಗ್ಲಿಷ್‌ನಲ್ಲಿ ಪುರಾತನ ಎಂಬ ಅರ್ಥ ಇದೆ, ಸನಾತನ ಎನ್ನುವುದು ಶಾಶ್ವತ ಎಂಬ ವ್ಯಾಖ್ಯಾನ ನೀಡುತ್ತದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.

ಸನಾತನ ಧರ್ಮದ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಗಳು

ಧರ್ಮಗಳ ಉದಯವನ್ನು ನೋಡಿದರೆ, ಮುಸ್ಲಿಂ ಧರ್ಮಕ್ಕೆ ೧೬೦೦ ವರ್ಷಗಳ ಇತಿಹಾಸ ಇದೆ,ಕ್ರಿಶ್ಚಿಯನ್ ಧರ್ಮಕ್ಕೆ ೨ ಸಾವಿರ ವರ್ಷಗಳ ಇತಿಹಾಸ ಇದೆ, ಬೌದ್ಧ ಮತ್ತು ಜೈನ ಧರ್ಮಗಳೆರೆಡು ೨೫೦೦ ವರ್ಷಗಳ ಹಿಂದೆ ಶುರುವಾಗಿದ್ದು. ಆನಂತರ ಸಿಖ್ ಮತ್ತು ಯಹೂದಿ ಧರ್ಮಗಳು ಬಂದವು.

ಆದರೆ, ಮಹಾಭಾರತದ ಕಾಲದಲ್ಲಿ ಕೃಷ್ಣ ಹಿಂದೂ ಧರ್ಮದ ಬಗ್ಗೆ ಹೇಳಿದ್ದಾನೆ. ಆದ್ದರಿಂದ ಹಿಂದೂ ಧರ್ಮ ಪುರಾತನವಾದುದು ಎಂಬ ಪುರಾವೆಗಳಿವೆ, ಹಿಂದೂ ಧರ್ಮ, ಸನಾತನ ಅಥವಾ ಪುರಾತನ ಎಂಬುದಕ್ಕೆ ಸಾಕ್ಷಿ ಇದೆ ಎಂದು ಹೇಳಿದರು.

ಪ್ರಪಂಚದಲ್ಲಿ ಎಲ್ಲಾ ವ್ಯಕ್ತಿಗಳು ವಿಭಿನ್ನವಾಗಿರುತ್ತಾರೆ,ಅದೇ ರೀತಿ ಎಲ್ಲರಿಗೂ ಬದುಕಲು ಆಮ್ಲಜನಕ ಬೇಕೇಬೇಕು. ಆಮ್ಲಜನಕ ಇಲ್ಲದೇ ಹೋದರೆ ಮನುಷ್ಯ ಏನಾಗುತ್ತಾನೆ ಊಹಿಸಿ ಎಂದು ಹೇಳುವ ಮೂಲಕ ಸನಾತನ ಧರ್ಮ ಎಲ್ಲಾ ಧರ್ಮಗಳಿಗಿಂತ ಪುರಾತನವಾದುದು ಎಂದು   ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

ಮೈಸೂರಿನ ಆದಿಚುಂಚನಗಿರಿ ಶಾಖಾಮಠದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶ್ರೀಗಳು ಸೆಪ್ಟೆಂಬರ್ ೧೦ ಮತ್ತು ೧೧ ರಂದು  ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ನೂತನ ಕಟ್ಟಡಗಳು ಲೋಕಾರ್ಪಣೆ ಆಗಲಿವೆ ಎಂದು ಹೇಳಿದರು.

ಮೊದಲ ದಿನ ಮಾಜಿ ಪ್ರಧಾನಿ ಎಚ್ ಡಿ.ದೇವೇಗೌಡರು ಭಾಗವಹಿಸಲಿದ್ದಾರೆ. ಎರಡನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ. ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.