ಮೈಸೂರು: ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಭಿಮನ್ಯು ಅಂಬಾರಿ ಹೊರುವ ಸಾಧ್ಯತೆ ಇದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಕುರಿತು ಸೆ. 8ರಂದು ಬೆಂಗಳೂರಲ್ಲಿ ಹೈಪವರ್ ಕಮಿಟಿ ಮೀಟಿಂಗ್ ನಡೆಯಲಿದೆ.
ಈ ಬಾರಿ ಯಾವ ರೀತಿ ದಸರಾ ಆಚರಿಸಬೇಕೆನ್ನುವ ಕುರಿತು ಅಂತಿಮ ತೀರ್ಮಾನವಾಗಲಿದೆ.
ಜಂಬೂ ಸವಾರಿ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಅಂಬಾರಿ ಹೊರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸುಪ್ರೀಂಕೋರ್ಟ್ ಆದೇಶದಂತೆ 60 ವರ್ಷ ತುಂಬಿದ ಆನೆಗಳಿಗೆ ಭಾರ ಹೊರಿಸುವಂತಿಲ್ಲ.
ಹಾಗಾಗಿ ಈ ಬಾರಿ ಅರ್ಜುನನ ಬದಲು ಅಭಿಮನ್ಯುಗೆ ಅಂಬಾರಿ ಹೊರುವ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.