ಆಂದ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್

ಅಮರಾವತಿ: ಸ್ಕಿಲ್​ ಡೆವಲಪ್​​ಮೆಂಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ (ತೆಲುಗು ದೇಶಂ ಪಕ್ಷ) ಮುಖ್ಯಸ್ಥ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬಂಧಿಸಲಾಗಿದೆ.

ನಂದ್ಯಾಲ್ ರೇಂಜ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ ನೇತೃತ್ವದ ಪೊಲೀಸರ ತಂಡ ಚಂದ್ರಬಾಬು ನಾಯ್ಡು ಅವರನ್ನು‌ ವಶಕ್ಕೆ ಪಡೆಯಿತು.

ನಂದ್ಯಾಲ ಪಟ್ಟಣದಲ್ಲಿ ಆರ್‌ಕೆ ಫಂಕ್ಷನ್ ಹಾಲ್‌ನಲ್ಲಿ ಶಿಬಿರದಲ್ಲಿದ್ದ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ವಶಕ್ಕೆ ‌ಪಡೆದು ಪೊಲೀಸರು ಕರೆದೊಯ್ದರು.

ಪೊಲೀಸ್ ‌ತಂಡ‌ ಬಂದ ಸಂದರ್ಭದಲ್ಲಿ ಅವರು ತಮ್ಮ ಕಾರವಾನ್‌ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು.