ಮೈಸೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಮತ್ತೆ ಹದಿನೈದು ದಿನಗಳ ಕಾಲ 5000 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿರುವುದನ್ನು ಖಂಡಿಸಿ ಮೈಸೂರಿನ ಕಾಡ ಕಚೇರಿ ಮುಂದೆ ಗುರುವಾರ ವಿವಿಧ ರೈತ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ವಿರುದ್ಧವು ಪ್ರತಿಭಟನಾಕಾರರು ತೀರ ಬೇಸರ ವ್ಯಕ್ತಪಡಿಸಿದರು.
ಪ್ರತಿಭಟನೆ ಒಂದು ಹಂತದಲ್ಲಿ ಜೋರಾಗಿ ಕಾಡಾ ಕಚೇರಿಗೆ ಬೇಗ ಜಡಿಯಲು ಪ್ರತಿಭಟನಾ ನಿರತರು ಯತ್ನಿಸಿದರು.
ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಶಾಂತಿಯುತವಾಗಿ ಹೋರಾಟ ನಡೆಸುವಂತೆ ಸೂಚಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘಟನೆಯ ಮಹಿಳಾ ಸದಸ್ಯರು ಪಾಲ್ಗೊಂಡಿದ್ದು ವಿಶೇಷ.
ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧವು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು. ತಮಿಳುನಾಡಿನ ಒತ್ತಾಯಕ್ಕೆ ಮಣಿದು ನೀರು ಹರಿಸಲಾಗುತ್ತಿದೆ ಎಂದು ಕಿಡಿಕಾರಿದರು.
ನಮ್ಮ ರೈತರ ಹಿತ ಕಾಪಾಡುವಲ್ಲಿ ಕರ್ನಾಟಕ ಸರ್ಕಾರ ವಿಫಲವಾಗಿದೆ. ನಮಗೆ ಕುಡಿಯಲು ನೀರಿಲ್ಲ ಈಗ ಎಲ್ಲಿಂದ ನೀರು ಬಿಡುವುದು. ಸರ್ಕಾರ ನಮ್ಮನ್ನು ನಿರ್ಲಕ್ಷ್ಯ ಮಾಡಿದೆ,ತಮಿಳುನಾಡಿಗೆ ಪದೇ ಪದೇ ನೀರು ಬಿಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.