ಪತ್ನಿಯ ಕತ್ತು ಹಿಸುಕಿ ಕೊಂದ ಪಾಪಿ ಪತಿ

ಮೈಸೂರು: ಪಾಪಿ ಪತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ಪತ್ನಿಯ ಕೊಂದ ಪಾಪಿ ಈಗ ಕಂಬಿ ಎಣಿಸುತ್ತಿದ್ದಾನೆ.

ಈ ಘಟನೆ ಮೈಸೂರು ಜಿಲ್ಲೆ, ನಂಜನಗೂಡು ತಾಲೂಕಿನ ದೊಡ್ಡಹೊಮ್ಮ ಗ್ರಾಮದಲ್ಲಿ ನಡೆದಿದೆ.

ರೂಪ(35)ಕೊಲೆಯಾದ ದುರ್ದೈವಿ.

ಪತಿ ಪುರುಷೋತ್ತಮ್(40) ನನ್ನು ಪೊಲೀಸರು ಬಂಧಿಸಿದ್ದಾರೆ.

ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಪುರುಷೋತ್ತಮ್ ನೊಂದಿಗೆ ಕಳೆದ 8 ವರ್ಷಗಳ ಹಿಂದೆ ದೊಡ್ಡಹೊಮ್ಮ ಗ್ರಾಮದ ರೂಪಾ ಅವರನ್ನು ವಿವಾಹ ಮಾಡಿಕೊಡಲಾಗಿತ್ತು.ಈ ದಂಪತಿಗೆ ಆರು ವರ್ಷದ ಮಗುವಿದೆ

ಗಂಡ ಹೆಂಡತಿ ನಡುವೆ, ಕ್ಷುಲ್ಲಕ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು.ಗುರುವಾರ ಕೂಡಾ ಜಗಳ ನಡೆದು ವಿಕೋಪಕ್ಕೆ ತಿರುಗಿ ಪುರುಷೋತ್ತಮ್ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಪುರುಷೋತ್ತಮ್ ಸದಾ ನನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದ.ಈಗ ಕೊಲೆಯಾಗಿದೆ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಂದೆ ರಾಮಯ್ಯ ಕವಲಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಎ ಎಸ್ಪಿ ನಂದಿನಿ, ಡಿವೈಎಸ್ಪಿ ಗೋವಿಂದರಾಜು, ಸರ್ಕಲ್ ಇನ್ಸ್‌ಪೆಕ್ಟರ್ ಚಂದ್ರಶೇಖರ್, ಪಿಎಸ್ಐ ಕೃಷ್ಣಕಾಂತಕೋಳಿ, ಭೇಟಿ ನೀಡಿ ಪರಿಶೀಲಿಸಿದರು.

ಪುರುಷೋತ್ತಮ್ ನನ್ನು ಕವಲಂದೆ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.