ಮಂಡ್ಯ-ಮದ್ದೂರು ಬಂದ್ ಯಶಸ್ವಿ: ಸ್ಥಬ್ದಗೊಂಡ ನಗರಗಳು;ರಸ್ತೆಯಲ್ಲಿ ಮಲಗಿ ರೈತರ ಆಕ್ರೋಶ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಹಿತರಕ್ಷಣಾ ಸಮಿತಿ ಶನಿವಾರ ಕರೆ ನೀಡಿದ್ದ‌ ಮಂಡ್ಯ, ಮದ್ದೂರು ಬಂದ್ ಬಹುತೇಕ ಯಶಸ್ವಿಯಾಗಿದೆ.

ಮಂಡ್ಯ ಹಾಗೂ ಮದ್ದೂರು ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಮುಚ್ಚಲಾಗಿದೆ, ವಾಣಿಜ್ಯ ಚಟುವಟಿಕೆ ಸಂಪೂರ್ಣ ಸ್ತಬ್ಧಗೊಂಡಿದೆ.

ಆಟೊ, ಖಾಸಗಿ, ಸಾರಿಗೆ ಸಂಸ್ಥೆ ಬಸ್ ಗಳು ರಸ್ತೆಗೆ ಇಳಿಯಲಿಲ್ಲ. ಶಾಲಾ ಕಾಲೇಜು, ಚಿತ್ರಮಂದಿರಗಳು ಬಂದ್ ಆಗಿವೆ. ನಗರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿವೆ. ವಾಹನ ಸಂಚಾರಕ್ಕೆ ಬದಲಿ ಮಾರ್ಗ ಕಲ್ಪಿಸಲಾಗಿದೆ.
ವಿವಿಧ ಸಂಘಟನೆಗಳ ಸದಸ್ಯರು ಬೈಕ್ ರ್‍ಯಾಲಿ ನಡೆಸಿ‌ ಕಾವೇರಿ ಜಾಗೃತಿ ಕರಪತ್ರ ಹಂಚಿದರು.

ಜೆ.ಸಿ ವೃತ್ತದಲ್ಲಿ ರೈತ ಮುಖಂಡರು ರಸ್ತೆಯಲ್ಲಿ ಮಲಗಿ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಬೇಕು ಎಂದು ಆಗ್ರಹಿಸಿದರು.