ಶ್ರೀಮಂತ ಕುಟುಂಬದ ವಿದ್ಯಾರ್ಥಿ ಸೆಳೆಯಲು ಐಸ್ ಕ್ರೀಂನಲ್ಲಿ ಡ್ರಗ್ಸ್ -ಸುರೇಶ್ ಕುಮಾರ್

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ.
ಚಾಮರಾಜನಗರ: ಶ್ರೀಮಂತ ಕುಟುಂಬದ ವಿದ್ಯಾರ್ಥಿಗಳನ್ನು ಡ್ರಗ್ಸ್ ಬಲೆಗೆ ಸೆಳೆಯಲು ದಂಧೆಕೋರರು ಮಕ್ಕಳು ತಿನ್ನುವ ಐಸ್ ಕ್ರೀಂಗೆ ಡ್ರಗ್ಸ್ ಸವರಿ ಕೊಡುವ ಅನುಮಾನ ಇದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸಚಿವ ಸುರೇಶ್ ಕುಮಾರ್ ಸೋಮವಾರ ಮಾತನಾಡಿದರು.
ಶ್ರೀಮಂತ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳನ್ನು ಸೆಳೆಯಲು ದಂಧೆಕೋರರು ಐಸ್ ಕ್ರೀಂಗೆ ಅಥವಾ ಹಣ್ಣುಗಳಿಗೆ ಡ್ರಗ್ಸ್ ಸವರಿ ಕೊಡುವ ಅನುಮಾನ ಇದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು
ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ತೀರ್ಮಾನ ಕೈಗೊಂಡಿದೆ. ಈ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದರು.
ಸಮಾಜ ಹಾಗೂ ಯುವ ಜನಾಂಗವನ್ನು ದುರ್ಬಲಗೊಳಿಸುವ ಯತ್ನಕ್ಕೆ ತಾರ್ಕಿಕ ಅಂತ್ಯ ಕಾಣಿಸಬೇಕು. ಡ್ರಗ್ಸ್ ದಂಧೆಯನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಸುರೇಶ್ ಕುಮಾರ್ ಹೇಳಿದರು.