ಮೈಸೂರು: ಕರ್ನಾಟಕದ ಜೀವನದಿ ಕಾವೇರಿಯನ್ನು ತಮಿಳು ನಾಡಿಗೆ ಹರಿಸುತ್ತಿರುವುದರಿಂದ ಕೃಷಿ ವರ್ಗಕ್ಕೆ, ಕುಡಿಯುವ ನೀರಿಗೆ ಆಗುತ್ತಿರುವ ಅನ್ಯಾಯ ಮತ್ತು ತಮಿಳುನಾಡಿನ ಧೋರಣೆ ಖಂಡಿಸಿ ಮೈಸೂರು ಬ್ರಾಹ್ಮಣ ಸಂಘದ ನೇತೃತ್ವದಲ್ಲಿ ವಿಪ್ರ ಸಮುದಾಯದವರು ವಿನೂತನ ಪ್ರತಿಭಟನೆ ನಡೆಸಿದರು.
ಜಾಗಟೆ, ಶಂಕ,ಗಂಟೆ ನಿನಾದದ ಮೂಲಕ ಸಾಮೂಹಿಕ ಭಜನೆ ಮಾಡಿ ಮೈಸೂರು ಜಿಲ್ಲಾ ಪಂಚಾಯತ್ ಎದುರುಗಡೆ ಮಂಗಳವಾರ ವಿಪ್ರ ಸಮುದಾಯದವರು ವಿಶೇಷ ಪ್ರತಿಭಟನೆ ನಡೆಸಿ ಜನರ ಗಮನ ಸೆಳೆದರು.
ಈ ವೇಳೆ ಮೈಸೂರು ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ. ಪ್ರಕಾಶ್ ಅವರು ಮಾತನಾಡಿ ಕನ್ನಡ ನೆಲ, ಜಲ, ಭಾಷೆ ವಿಚಾರವಾಗಿ ಧಕ್ಕೆ ಬಂದಾಗ ಪ್ರತಿಭಟಿಸುವುದು ನ್ಯಾಯ ಕೇಳುಕುವುದು ಪ್ರತಿಯೊಬ್ಬ ಕನ್ನಡಿಗರ ಹಕ್ಕು ಎಂದು ತಿಳಿಸಿದರು.
ಸುಪ್ರಿಂಕೋರ್ಟ್ ತೀರ್ಪಿಗೆ ತಲೆಬಾಗಬೇಕು ನಿಜ, ಆದರೆ ವಾಸ್ತವತೆ, ವೈಜ್ಞಾನಿಕತೆ ವಿಷಯವನ್ನ ಅರಿವು ಮಾಡಿಕೊಡಬೇಕಾಗಿರುವುದು ನಮ್ಮ ಕರ್ನಾಟಕದ ಜನಪ್ರತಿನಿಧಿಗಳ ಕರ್ತವ್ಯ ಎಂದು ಹೇಳಿದರು.
ಈ ಹಿಂದೆ ಕೂಡ ಕರ್ನಾಟಕಕ್ಕೆ ತಮಿಳುನಾಡು ಸರ್ಕಾರ ನೀರಿಗಾಗಿ ಖ್ಯಾತೆ ತೆಗೆದಾಗ ಅಂದು ಮಾಜಿ ಪ್ರಧಾನಿ ಹೆಚ್.ಡಿ ದೇವಗೌಡ ಮತ್ತು ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ರವರ ನೇತೃತ್ವದಲ್ಲಿ ಕರ್ನಾಟಕದ ಸಮಸ್ತ ಜನಪ್ರತಿನಿಧಿಗಳ ನಿಯೋಗ ರಾಷ್ಟ್ರಪತಿ ಹಾಗೂ ರಾಜ್ಯಪಲರ ಬಳಿ ಕರ್ನಾಟಕದ ಸಮಸ್ಯೆಯನ್ನ ತಿಳಿಸಿ ನ್ಯಾಯ ಕೊಡಿಸಿದ್ದರು ಎಂದು ಸ್ಮರಿಸಿದರು.
ಇಂದು ಅಂತಹ ಆರೊಗ್ಯಕರ ಸಮನ್ವಯ ಕಾಣದಿರುವುದು ಬೇಸರದ ಸಂಗತಿ ಎಂದರು.
ಮತ್ತೊಮ್ಮೆ ನ್ಯಾಯಾಲಯ ಕಾವೇರಿ ತೀರ್ಪನ್ನ ಪರಿಶೀಲಿಸಿ 5000 ಕ್ಯೂಸೆಕ್ ನೀರು ಬಿಡುತ್ತಿರುವ ಬಗ್ಗೆ ಚರ್ಚಿಸಿ ಕನ್ನಡಿಗರಿಗೆ ನ್ಯಾಯ ಸಿಗುವಂತೆ ಮಾಡಬೇಕು ಎಂದು ಅಗ್ರಹಿಹಿಸಿದರು,
ನಂತರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ನಂ.ಶ್ರೀಕಂಠಕುಮಾರ್ ಮಾತನಾಡಿ ಮೇಕೆದಾಟು ಯೋಜನೆ ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದನ್ನ ಕಾರ್ಯರೂಪಕ್ಕೆ ತಂದಿಲ್ಲ,ಕೂಡಲೆ ಯೋಜನೆ ತರಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್ ಮಾತನಾಡಿ,
ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದಿದ್ದಾಗ ‘ನಮ್ಮ ನೀರು ನಮ್ಮ ಹಕ್ಕು’ ಎಂದು ಹೋರಾಟ ನಡೆಸಿದರು. ಅಧಿಕಾರಕ್ಕೆ ಬಂದ ಮೇಲೆ ಅದನ್ನು ಮರೆತರು ಎಂದು ಟೀಕಿಸಿದರು.
ನೀರಾವರಿ ಸಚಿವರು ಕಾವೇರಿ ನೀರು ಉಳಿಸುವ ಹೋರಾಟಕ್ಕಿಂತ ಬ್ರ್ಯಾಂಡ್ ಬೆಂಗಳೂರಿಗೆ ಒತ್ತು ಕೊಟ್ಟು ಕಾವೇರಿ ಹೋರಾಟ ಮರೆತರು. ಅದರ ಪರಿಣಾಮ ಕಾವೇರಿ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ನಲ್ಲಿ ನಮಗೆ ಹಿನ್ನಡೆಯಾಗಿದೆ ಎಂದು ಹೇಳಿದರು
ಗ್ರಾಮಾಂತರ ಅಧ್ಯಕ್ಷ ಗೋಪಾಲ್ ರಾವ್, ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ. ಆರ್ ಸತ್ಯನಾರಾಯಣ್, ಅರ್ಚಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಕೃಷ್ಣಮೂರ್ತಿ, ಪಾಲಿಕೆ ಮಾಜಿ ಸದಸ್ಯ ಎಂ ಡಿ ಪಾರ್ಥಸಾರಥಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಅಧ್ಯಕ್ಷ ಎಚ್. ಎನ್. ಶ್ರೀಧರ್ ಮೂರ್ತಿ, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಕಡಕೋಳ ಜಗದೀಶ್, ಜಯಸಿಂಹ ಶ್ರೀಧರ್, ಶ್ರೀನಿವಾಸ್ ಬಾಷ್ಯಂ, ಓಂ ಶ್ರೀನಿವಾಸ್, ಅಪೂರ್ವ ಸುರೇಶ್, ಶ್ರೀಕಾಂತ್ ಕಶ್ಯಪ್ ,ಮುಳ್ಳೂರು ಸುರೇಶ್, ಪ್ರಶಾಂತ್, ರಂಗನಾಥ್, ವಿಜಯ್ ಕುಮಾರ್, ಡಾಕ್ಟರ್ ಲಕ್ಷ್ಮಿ,ನಗರ ಪಾಲಿಕೆ ಮಾಜಿ ಸದಸ್ಯರಾದ ಸೌಭಾಗ್ಯ ಮೂರ್ತಿ,
ಸುಚಿಂದ್ರ, ಜ್ಯೋತಿ, ನಾಗಶ್ರೀ, ಪುಟ್ಟಸ್ವಾಮಿ, ರಾಜಗೋಪಾಲ್, ವಸುದೇವ್ ಮೂರ್ತಿ, ಹರೀಶ್ ಹಾಗೂ ವಿಪ್ರ ಸಂಘ, ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.