ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಒಪ್ಪಿಕೊಂಡ ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಎರಡರಿಂದ ಮೂರು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ ಹಾಗಾಗಿ ಅನಿವಾರ್ಯ ವಾಗಿ ವಿದ್ಯುತ್ ಕಡಿತ ಗೊಳಿಸಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಹಾಗೂ ಲೋಡ್ ಶೆಡ್ಡಿಂಗ್ ಇರುವುದನ್ನು ಸಿಎಂ ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ

ಮೈಸೂರಿನ ಅವರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದು,ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆಯೇ ನಡೆಯಲಿಲ್ಲ ಹಾಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಟಾಂಗ್ ನೀಡಿದರು.

ಹೊರಗಡೆ ವಿದ್ಯುತ್ ಖರೀದಿ ಮಾಡುವಂತೆ  ನಾನು ಸೂಚನೆ ಕೊಟ್ಟಿದ್ದೇನೆ, ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಆದೇಶ ನೀಡಿದ್ದೇವೆ ಎಂದು ತಿಳಿಸಿದರು ‌

ಆದಷ್ಟು ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ‌, ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರಿ ಫೇಸ್ ವಿದ್ಯುತ್ ಕೊಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ,ಎಲ್ಲ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಕುಡಿಯುವ ‌ನೀರು, ಮೇವಿನ ಕೊರತೆ,  ‌ನಿವಾರಣೆಗೂ ಸೂಕ್ತ ಕ್ರಮ ತೆಗೆದುಕೊಂಡಿದ್ದೇವೆ ಎಂದು ಇದೇ ವೇಳೆ ಸಿಎಂ ಸ್ಪಷ್ಟಪಡಿಸಿದರು.

ಈ ಬಾರಿ ಮಳೆ ಕೊರತೆಯಾದ ಕಾರಣ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ,ಹಾಗಾಗಿ ರಾಜ್ಯದ 236 ತಾಲ್ಲೂಕುಗಳ‌ ಪೈಕಿ 216 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ್ದೇವೆ ಎಂದು ತಿಳಿಸಿದರು.

42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಸಂಪೂರ್ಣ ನಾಶವಾಗಿದೆ, ಸದ್ಯಕ್ಕೆ ಕುಡಿಯುವ ನೀರಿ‌ನ ಸಮಸ್ಯೆಯಿಲ್ಲ,

ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಬಿದ್ದರೆ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.