ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 13ನೇ ವಾರ್ಷಿಕ ಘಟಕೋತ್ಸವ ಬುಧವಾರ ಮೈಸೂರು ವಿವಿ ಆವರಣದಲ್ಲಿನ ಕ್ರಾಫರ್ಡ್ ಹಾಲ್ ನಲ್ಲಿ ವಿಶೇಷವಾಗಿ ನೆರವೇರಿತು.
ಈ ಬಾರಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ನಾಡೋಜ ಡಾ. ಪಿ. ಎಸ್ ಶಂಕರ್, ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಸಂಸ್ಥಾಪಕ ಸಂಪಾದಕ ಕೆ.ಬಿ ಗಣಪತಿ ಹಾಗೂ ಅಂತರಾಷ್ಟ್ರೀಯ ಮಾಜಿ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.
ರಾಜ್ಯಪಾಲ ಹಾಗೂ ವಿವಿ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರ ಸಮ್ಮುಖದಲ್ಲಿ ನಡೆದ ಈ ಸಮಾರಂಭದಲ್ಲಿ ಡಾಕ್ಟರೇಟ್ ಪದವಿಯನ್ನು ಡಾ. ಪಿ. ಎಸ್ ಶಂಕರ್ ಹಾಗೂ ಕೆ.ಬಿ ಗಣಪತಿ ಅವರಿಗೆ ಮಂದಿಗೆ ಪ್ರದಾನ ಮಾಡಲಾಯಿತು. ಆದರೆ ಜಾವಗಲ್ ಶ್ರೀನಾಥ್ ಗೈರುಹಾಜರಾಗಿದ್ದರು.
ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ ವಿಶ್ರಾಂತ ಮಹಾ ನಿರ್ದೇಶಕ ಪದ್ಮಭೂಷಣ ಡಾಕ್ಟರ್ ವಾಸುದೇವ ಕೆ. ಅತ್ರೆ ಅವರು ಘಟಿಕೋತ್ಸವ ಭಾಷಣ ಮಾಡಿದರು.
ಉನ್ನತ ಶಿಕ್ಷಣ ಸಚಿವ ವಿವಿ ಸಮಕುಲಾದಧಿಪತಿ ಡಾ. ಎಂ. ಸಿ. ಸುಧಾಕರ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಒಟ್ಟು 32,240 ಮಂದಿ ಅಭ್ಯರ್ಥಿಗಳಿಗೆ ಪಿ ಎಚ್ ಡಿ ಹಾಗೂ ನಾನಾ ಪದವಿ ಪ್ರದಾನ ಮಾಡಲಾಯಿತು.
ಪದವಿ ಪಡೆದವರ ಪೈಕಿ 1251 ಮಂದಿ ಪುರುಷರು 20189 ಮಂದಿ ಮಹಿಳಾ ಅಭ್ಯರ್ಥಿಗಳು
ಈ ಘಟಿಕೋತ್ಸವದಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಪದವಿಯನ್ನು ಪಡೆದುದು ವಿಶೇಷ.
ವಿವಿಧ ವಿಷಯಗಳಲ್ಲಿ 539 ಅಭ್ಯರ್ಥಿಗಳು ಪಿ ಹೆಚ್ ಡಿ ಪದವಿ ಪಡೆದರು.
420 ಚಿನ್ನದ ಪದಕ 275 ನಗದು ಬಹುಮಾನಗಳನ್ನು 249 ಅಭ್ಯರ್ಥಿಗಳು ಪಡೆದುಕೊಂಡರು. ಅವರಲ್ಲಿ 180 ಮಂದಿ ಮಹಿಳಾ ಅಭ್ಯರ್ಥಿಗಳು.
5627 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಧಾನ ಮಾಡಲಾಯಿತು, 2674 ಮಂದಿ ಅಭ್ಯರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್. ಕೆ. ಲೋಕನಾಥ್, ವಿ ವಿ ಕುಲ ಸಚಿವರಾದ ವಿ. ಆರ್. ಶೈಲಜಾ, ಪ್ರೊ. ಕೆ. ಎ. ಮಹಾದೇವನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.