ಬೆಂಗಳೂರು: ದೇಶಾದ್ಯಂತ ಪ್ರಸಿದ್ದಿ ಪಡೆದಿರುವ ಬಿಗ್ ಬಾಸ್ ಮನೆಯಿಂದ ಸ್ಪರ್ಧಿಯೊಬ್ಬರು ಬಂಧಿತರಾಗಿದ್ದಾರೆ.
ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ.
ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ವರ್ತೂರು ಸಂತೋಷ್ ಅವರನ್ನು ಅರಣ್ಯ ಅಧಿಕಾರಿಗಳ ಮನವಿ ಮೇರೆಗೆ ರಾಮನಗರ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಸಂತೋಷ್ ಚಿನ್ನದ ಚೈನಿನಲ್ಲಿ ಹುಲಿ ಉಗುರಿನ ಲಾಕೆಟ್ ಧರಿಸಿದ್ದರು ಇದು ಅಪರಾಧ ಹಾಗಾಗಿ ಬಂಧನವಾಗಿದೆ.
ಹುಲಿ ಉಗುರು ಬಂದಿದ್ದು ಹೇಗೆ, ಯಾರು ಕೊಟ್ಟರು ಎಲ್ಲಿಂದ ಖರೀದಿ ಮಾಡಿದಿದ್ದೀರಿ ಇವೇ ಮೊದಲಾದ ಪ್ರಶ್ನೆಗಳನ್ನು ಅರಣ್ಯಾಧಿಕಾರಿಗಳು ಸಂತೋಷ್ ಗೆ ಕೇಳಿ ಉತ್ತರ ಪಡೆದಿದ್ದಾರೆ.
ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಸಂತೋಷ್ ಅವರ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಅವರು ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಲಾಗಿದ್ದು, ಅರಣ್ಯಾಧಿಕಾರಿಗಳು ಸಂತೋಷ್ ಅವರ ವಿಚಾರಣೆ ನಡೆಸಿದ್ದಾರೆ.
ಅಪರಿಚತರು ಹುಲಿ ಉಗುರನ್ನು ಮಾರಲು ತಂದಿದ್ದರು, ಅವರು ಎಲ್ಲಿಂದ ಬಂದಿದ್ದರು, ಯಾರು ಎಂಬುದು ಗೊತ್ತಿಲ್ಲ. ಮಾರಾಟ ಮಾಡುತ್ತಿರುವ ವಿಷಯ ಗೆಳೆಯರಿಂದ ತಿಳಿಯಿತು ಹಣ ಕೊಟ್ಟು ಖರೀದಿ ಮಾಡಿ ನಂತರ ಲಾಕೆಟ್ ಮಾಡಿಸಿ ಧರಿಸಿದ್ದಾಗಿ ಸಂತೋಷ್ ತಪ್ಪುಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಶರತ್ ಮಾಧ್ಯಮಗಳ ಜೊತೆ ಮಾತನಾಡಿ,ಎರಡು ದಿನದ ಹಿಂದೆ ನಾನು ದೂರು ಕೊಟ್ಟಿದ್ದೆ. ಹುಲಿ ಉಗುರು ಇರುವ ಪದಕವನ್ನು ಸಂತೋಷ್ ಧರಿಸಿದ್ದರು. ಇದು ವನ್ಯಜೀವಿ ಕಾಯ್ದೆ ಪ್ರಕಾರ ತಪ್ಪುಎಂದು ಹೇಳಿದರು.
ಸೆಲೆಬ್ರಿಟಿಗಳು ರೂಲ್ಸ್ ಪಾಲನೆ ಮಾಡಬೇಕು. ಅದು ಒರಿಜಿನಲ್ಲೋ ಅಥವಾ ಡೂಪ್ಲಿಕೇಟಾ ಅನ್ನೋದು ಫಾರೆನ್ಸಿಕ್ ನವರು ಡಿಸೈಡ್ ಮಾಡಬೇಕು ಎಂದು ಹೇಳಿದರು.