ಮಾವತರು ಕಾವಾಡಿಗಳೊಂದಿಗೆ ಜನ್ಮದಿನ ಆಚರಿಸಿ ಖುಷಿ ಪಟ್ಟ ಶೋಭಾ ಕರಂದ್ಲಾಜೆ

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮ್ಮ ಜನುಮದಿನವನ್ನು ಸೋಮವಾರ ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

ಮೈಸೂರಿನ ಅರಮನೆ ಆವರಣದಲ್ಲಿ ಕಾವಾಡಿಗರು ಮತ್ತು ಮಾವುತರಿಗೆ ವಿಶೇಷ ಉಪಹಾರ ಬಡಿಸುವ ಮೂಲಕ ವಿಭಿನ್ನ ರೀತಿಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ವಿಶ್ವ ವಿಖ್ಯಾತ ಮೈಸೂರಿನಲ್ಲಿ ದಸರಾ ಮಹೋತ್ಸವ ನಡೆಯುತ್ತಿದೆ. ಇಲ್ಲಿನ ಮಾವುತರು ಮತ್ತು ಕಾವಾಡಿಗಳಿಗೆ ಸ್ವತಃ ಶೋಭಾ ಕರಂದ್ಲಾಜೆ ಉಪಾಹಾರ ಬಡಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿ ಖುಷಿ ಪಟ್ಟರು.

ಅರಮನೆ ಆವರಣದಲ್ಲಿ ಉಪಾಹಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಮಾವುತರು ಮತ್ತು ಕಾವಾಡಿಗಳಿಗಾಗಿ ವಿಶೇಷ ಉಪಾಹಾರ ಸಿದ್ಧಪಡಿಸಲಾಗಿತ್ತು,ಜತೆಗೆ ಕೇಕ್ ಕತ್ತರಿಸುವ ಮೂಲಕ ಶೋಭಾ ಕರಂದ್ಲಾಜೆ ಜನುಮದಿನ ಆಚರಿಸಿದ್ದುವಿಶೇಷವಾಗಿತ್ತು,

ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳಿಯ ಬಿಜೆಪಿ ಮುಖಂಡರು ಸಾಥ್ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರದ್ಲಾಂಜೆ,ನಾನು ರಾಜ್ಯಸಚಿವೆಯಾಗಿದ್ದಾಗ ದಸರಾ ಸಂದರ್ಭದಲ್ಲಿ ಮಾವುತರು,ಕಾವಾಡಿಗರೊಂದಿಗೆ ಉಪಹಾರ ಸೇವಿಸಿದ್ದೆ ಇಂದು ಜನ್ಮದಿನವನ್ನೂ ಅವರೊಂದಿಗೇ ಆಚರಿಸಿದ್ದೇನೆ ಇದು ನನಗೆ ಸಂತಸದ ವಿಷಯ ಎಂದು ಹೇಳಿದರು.

ನೀವು ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದೀರಂತೆ ಎಂಬ ಮಾಧ್ಯಮದವರು ಪ್ರಶ್ನೆಗೆ ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ ಎಂದು ಹೇಳಿದರು.

ನಾನು ಅಲ್ಲಿಯೇ ಇರುತ್ತೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ನನಗೆ ಒಳ್ಳೆ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಯಾವ ವರಿಷ್ಠರಿಂದಲೂ ನನಗೆ ಯಾವ ಸೂಚನೆಗಳು ಬಂದಿಲ್ಲ ಇವೆಲ್ಲ ಸುದ್ದಿ ಹೇಗೆ ಬರುತ್ತಿವೆಯೂ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಮುಂದಿನ ಬಾರಿಯೂ ಮೋದಿ ಪ್ರಧಾನಿಯಾಗಬೇಕು ಎಂಬುದು ನನ್ನ ಇಚ್ಛೆ. ಅದನ್ನೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು.