ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮೈಸೂರಿನ ಮಹಾರಾಣಿ ಕಾಲೇಜು ಮತ್ತು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು.
ಅಲ್ಲಿನ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿದರು.ನಂತರ ಕಾಲೇಜಿನ ಪ್ರಾಂಶುಪಾಲರು,
ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ವಿದ್ಯಾರ್ಥಿನಿಯರ ಜತೆ ಸಿಎಂ ಸಂವಾದ ನಡೆಸಿದರು.ವಿದ್ಯಾರ್ಥಿನಿಯರ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರಲ್ಲದೆ ಹಲವು ವಿಷಯಗಳನ್ನು ಸಿದ್ದರಾಮಯ್ಯ ತಿಳಿಸಿಕೊಟ್ಟರು.
ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.
ನೂತನ ಕಟ್ಟಡಗಳ ನೀಲನಕ್ಷೆಯನ್ನು ಗಮನಿಸಿದ ಮುಖ್ಯಮಂತ್ರಿಗಳು ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವಂತೆ ಸಲಹೆ ನೀಡಿದರು.