ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ

ಚಾಮರಾಜನಗರ: ಪಾಗಲ್ ಪ್ರೇಮಿಯೊಬ್ಬ ಪ್ರೀತಿಸುವಂತೆ ಪೀಡಿಸುತ್ತಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗಾ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಹೊಣಕಣಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಶ್ರೀನಿ ಎಂಬಾತ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ, ಆಕೆಯ ಮೊಬೈಲ್‌ಗೆ ಸಂದೇಶ ಕಳುಹಿಸಿ, ಪ್ರೀತಿಸು ಎಂದು ಪೀಡಿಸುತ್ತಿದ್ದ ಎಂದು ಮೃತಳ ಪಾಲಕರು ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತಪಟ್ಟ ಬಾಲಕಿ ನಂಜನಗೂಡಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದಳು.

ಬೇಗೂರು ಪೊಲೀಸರು ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದ್ದು,ಮುಂದಿನ ಕ್ರಮ ಕೈಗೊಂಡಿದ್ದಾರೆ.