ಸಿದ್ದರಾಮಯ್ಯ ಅವರ ಕೈ ಕಟ್ಟಿ ಹಾಕಲಾಗಿದೆ: ಮಾರ್ಮಿಕವಾಗಿ ನುಡಿದ ಸಾಹುಕಾರ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಫ್ರೀ ಹ್ಯಾಂಡ್ ಆಗಿಲ್ಲ ಅವರ ಕೈಗಳನ್ನು ಯಾರೋ ಕಟ್ಟಿ ಹಾಕಿದ್ದಾರೆ ಎಂದು ಮಾಜಿ ಸಚಿವ ಬೆಳಗಾವಿಯ ಸಾಹುಕಾರ್ ಖ್ಯಾತಿಯ ರಮೇಶ್ ಜಾರಕಿಹೊಳಿ ಮಾರ್ಮಿಕವಾಗಿ ನುಡಿದಿದ್ದಾರೆ.

ಬೆಳಗಾವಿಯಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಸಿದ್ದರಾಮಯ್ಯ ಅವರು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ ಯಾರೋ ಅವರನ್ನು ಕಟ್ಟಿ ಹಾಕುತ್ತಿದ್ದಾರೆ ಅವರಿಗೆ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಆಗುತ್ತಿಲ್ಲ ಎಂದು ಸಿದ್ದು ಪರ ಬ್ಯಾಟಿಂಗ್ ಮಾಡಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ಸಂದರ್ಭದಲ್ಲಿ ನಮ್ಮ ಸಹೋದರ ಸತೀಶ್ ಜಾರಕಿಹೊಳಿಗೆ ಕಿರುಕುಳ ಆಗುತ್ತಿದೆ ಎಂದು ಅವರು ಹೇಳಿದರು.

ಒಂದು ವೇಳೆ ಬೇರೆ ಅವರು ಮುಖ್ಯಮಂತ್ರಿಯಾಗಿರುತ್ತಿದ್ದರೆ ಸತೀಶ್ ಕಥೆ ಏನಾಗುತ್ತಿತ್ತೊ, ಈಗಲೇ ಆತನಿಗೆ ತಡೆದುಕೊಳ್ಳಲು ಆಗದಷ್ಟು ಹಿಂಸೆ ಆಗುತ್ತಿದೆ ಎಂದು ಸಹೋದರನ‌ ಬಗ್ಗೆಯೂ ಸಾಹುಕಾರ್ ಬ್ಯಾಟಿಂಗ್ ಬೀಸಿದ್ದಾರೆ.