ಮೈಸೂರಿನಲ್ಲೂ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ:ಆನೆ ಹಲ್ಲುಗಳು ವಶ

ಮೈಸೂರು: ಹುಲಿ ಉಗರು‌ ಸಂಬಂಧ ರಾಜ್ಯದಲ್ಲಿ ಹಲವು ಪ್ರಕರಣಗಳು ದಾಖಲಾಗುತ್ತಲೇ ಇದ್ದು ಇದೀಗ ಆನೆಗೆ ಸಂಬಂಧಿಸಿದ ವಸ್ತುಗಳನ್ನೂ ವಶಪಡಿಸಿಕೊಳ್ಳಲಾಗುತ್ತಿದೆ‌.

ಇತ್ತ ಮೈಸೂರಿನಲ್ಲೂ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಿಯೊಬ್ಬರ ಮನೆ ಮೇಲೆ ದಾಳಿ ಮಾಡಿ ಆನೆಯ‌ ದವಡೆ ಹಲ್ಲುಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಉದಯಗಿರಿ ವಾಸಿ ಅಭಿರಾಮ್ ಸುಂದರಂ ಅವರ ಮನೆ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅವರ ಮನೆಯಲ್ಲಿದ್ದ ಆನೆಯ ಒಂದು ಜೊತೆ ದವಡೆ ಹಲ್ಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಅರಣ್ಯ ಕಾಯ್ದೆ 1972ರ ಪ್ರಕಾರ ಅಭಿರಾಮ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿದೆ.

ಆರ್‌ಎಫ್‌ಒ ಸುರೇಂದ್ರ ಅವರ ನೇತೃತ್ವದಲ್ಲಿ ಡಿಸಿಎಫ್ ಡಾ. ಬಸವರಾಜು, ಎಸಿಎಫ್ ಲಕ್ಷ್ಮಿಕಾಂತ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ