ಮೈಸೂರು: ಕೇಂದ್ರ ಸರ್ಕಾರದ ಅನುದಾನ ಅಸಮರ್ಪಕ ಬಳಕೆ ಕುರಿತು ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅನುದಾನಗಳ ಹಣವನ್ನು ನಿರ್ದಿಷ್ಟ ಕಾಮಗಾರಿಗಳಿಗೆ ಮಾತ್ರವೇ ಬಳಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರತಾಪ್ ಸಿಂಹ ಪತ್ರ ಬರೆದು ಸೂಚಿಸಿದ್ದಾರೆ.
14ನೇ ಹಣಕಾಸು ಯೋಜನೆ ಉಳಿಕೆ 9.30 ಕೋಟಿ ಹಣ ಹಾಗೂ 15ನೇ ಹಣಕಾಸು ಯೋಜನೆಯಲ್ಲಿ ಬಿಡುಗಡೆಯಾಗಿರುವ 69.39 ಕೋಟಿ ಹಣವನ್ನು ಅತ್ಯವಶ್ಯಕ ಕಾಮಗಾರಿಗಳಿಗೆ ಬಳಸಿಕೊಳ್ಳಬೇಕು. ಅನುದಾನವನ್ನು ವಿದ್ಯಾರಣ್ಯಪುರಂ, ರಾಯನಕೆರೆ ಹಾಗೂ ಕೆಸರೆ ಘನ ತ್ಯಾಜ್ಯ ಘಟಕಕ್ಕೆ ಬಳಸಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
ನಿಯಮಾವಳಿ ಪ್ರಕಾರ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಪಾಲಿಕೆ ಸದಸ್ಯರ ಅಭಿಪ್ರಾಯವನ್ನು ಪಡೆದು ಅನುದಾನ ವಿನಿಯೋಗ ಮಾಡಬೇಕು ಎಂದವರು ಸೂಚನೆ ಇತ್ತಿದ್ದಾರೆ.
ಕೇಂದ್ರ ಸರ್ಕಾರದ ಈ ಅನುದಾನವನ್ನು ಯಾವುದೇ ಕಾರಣಕ್ಕೂ ವೃತ್ತಗಳು, ಸ್ಮಶಾನ ಅಭಿವೃದ್ಧಿ ಕಾಮಗಾರಿಗೆ ಪೆÇೀಲು ಮಾಡಬಾರದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.