ಮೈಸೂರು: ನಂಜನಗೂಡು ಸುತ್ತಮುತ್ತ ಜನ ಜಾನುವಾರುಗಳಿಗೆ ಕಂಟಕ ಪ್ರಾಯವಾಗಿರುವ ಹುಲಿಯನ್ನು ಶೀಘ್ರವೇ ಸೆರೆಹಿಡಿಯ ಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು
ಇತ್ತೀಚೆಗೆ ನಂಜನಗೂಡು ತಾಲೂಕಿನ ಮಹದೇವರನಗರ ಗ್ರಾಮದಲ್ಲಿ ದನ ಮೇಯಿಸುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿತ್ತು.
ಈ ವೇಳೆ ರೈತ ವೀರಭದ್ರ ಭೋವಿ ಅವರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಪದೇ ಪದೇ ಹುಲಿ ದಾಳಿಯಿಂದ ಬೇಸತ್ತ ಜನ ಅರಣ್ಯ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.
ಹಾಗಾಗಿ ಗ್ರಾಮಸ್ಥರನ್ನು ಭೇಟಿಯಾಗಿ ಸಮಾಧಾನಪಡಿಸಿದ ದರ್ಶನ್ ಹುಲಿ ಸೆರೆಗೆ ಶೀಘ್ರದಲ್ಲೇ ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಹೇಳಿದರು.
ಹುಲಿ ಸೆರೆಗೆ ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ ಆರಂಭಿಸಲಾಗುತ್ತದೆ. ಹುಲಿ ಸೆರೆಗೆ ಆನೆಗಳನ್ನ ಬಳಸಿಕೊಳ್ಳಲಾಗುತ್ತದೆ ಎಂದು ಮಾಧ್ಯಮದ ವರಿಗೆ ತಿಳಿಸಿದರು.
ಹುಲಿ ದಾಳಿಯಲ್ಲಿ ಗಾಯಗೊಂಡ ರೈತ ವೀರಭದ್ರ ಭೋವಿ ಅವರ ಆಸ್ಪತ್ರೆ ಖರ್ಚು ವೆಚ್ಚಗಳನ್ನು ಸರ್ಕಾರ ಮತ್ತು ಅರಣ್ಯ ಇಲಾಖೆ ಭರಿಸುತ್ತದೆ. ನಾನು ಕೂಡ ವೈಯಕ್ತಿಕವಾಗಿ ಪರಿಹಾರ ನೀಡಿ ಆತ್ಮಸ್ಥೈರ್ಯ ತುಂಬಿದ್ದೇನೆ ಎಂದು ಹೇಳಿದರು.