ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

ಮೈಸೂರು: ಕಬ್ಬಿಗೆ ಬೆಂಬಲ ಬೆಲೆ ನಿಗದಿ ಪಡಿಸುವುದೂ ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನ ಪೊಲೀಸರು ಬಂಧಿಸಿದರು.

ರೈತ ಮುಖಂಡ ಕುರುಬೂರು ಶಾಂತಕುಮಾರ್ ಸೇರಿದಂತೆ 50ಕ್ಕೂ ಹೆಚ್ಚು ರೈತರನ್ನ ಕರೆದೊಯ್ದರು.

ಸಿಎಂ ಸಿದ್ದರಾಮಯ್ಯ ಅವರ ಟಿ ಕೆ ಬಡಾವಣೆ ನಿವಾಸದ ಬಳಿ ರೈತರು ಪ್ರತಿಭಟನೆ ನಡೆಸಿದರು.

ಮಹಿಳೆಯರೂ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸದ ಈ ಕ್ರಮಕ್ಕೆ ಕುರುಬೂರು ಶಾಂತಕುಮಾರ್ ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದರು.

ಈ ವೇಳೆ ಕುರುಬೂರು ಶಾಂತಕುಮಾರ್ ಹಾಗೂ ಕೆಲ ರೈತರನ್ನು ಪೊಲೀಸರುಬಲವಂತವಾಗಿ ಎಳೆದೊಯ್ದು

ವಶಕ್ಕೆ ಪಡೆದರು.