ಮಂಗಳೂರು: ಚೆನ್ನಾಗಿ ಓದಿ ಬೇರೆಯವರ ಜೀವ ಕಾಪಾಡಬೇಕಾದ ವೈದ್ಯ ವಿದ್ಯಾರ್ಥಿ ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಎಂಬಿಬಿಎಸ್ ವಿದ್ಯಾರ್ಥಿನಿ ಮಹಿಳಾ ವಿದ್ಯಾರ್ಥಿ ನಿಲಯದ 6 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರಿನ ಎ.ಜೆ ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಸೋಮವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದೆ.
ಬೆಳಿಗ್ಗೆ ಇತರೆ ವಿದ್ಯಾರ್ಥಿನುರು ಎಚ್ಚರಗೊಂಡಾಗ ಪ್ರಕೃತಿಯ ಕೊಠಡಿಯಲ್ಲಿ ಇಲ್ಲದ್ದನ್ನು ಕಂಡು ಮೇಲ್ವಚಾರಕರಿಗೆ ತಿಳಿಸಿದ್ದಾರೆ.
ಅಷ್ಟರಲ್ಲಿ ಸೆಕ್ಯುರಿಟಿ ಪ್ರಕೃತಿಯ ದೇಹ ಕೆಳಗೆ ಬಿದ್ದಿರುವುದನ್ನು ಕಂಡು ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಡೆತ್ ಬರೆದಿಟ್ಟಿದ್ದು ಸ್ಥಳದಲ್ಲಿ ಸಿಕ್ಕಿದೆ. ಅದರಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.