ಅನಧಿಕೃತ ಕಟ್ಟಡ ತೆರವುಗೊಳಿಸಿದ ಮೂಡಾ

ಮೈಸೂರು: ಮೈಸೂರು ನಗರ ಬನ್ನಿಮಂಟಪ ಬಿ ಬಡಾವಣೆಯ ನಿವೇಶನ ಸಂಖ್ಯೆ 386 ಮತ್ತು 400/ಬಿ ನಿವೇಶನದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಕಟ್ಟಡವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ತೆರವುಗೊಳಿಸಿ ವಶಪಡಿಸಿಕೊಂಡಿದೆ.
ಸುಮಾರು ರೂ. 2 ಕೋಟಿ ಬೆಲೆಬಾಳುವ ನಿವೇಶನಗಳಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ಅನಧಿಕೃತವಾಗಿ ಲಾರಿ ಟ್ರಾನ್ಸ್‍ಪೆÇೀರ್ಟ್ ಕಚೇರಿಯನ್ನು ನಿರ್ಮಿಸಿ ತಂತಿಬೇಲಿ ಅಳವಡಿಸಿಕೊಂಡಿದ್ದರು.
ಪ್ರಾಧಿಕಾರದ ಆಯುಕ್ತರ ನಿರ್ದೇಶನದಂತೆ ಅನಧಿಕೃತವಾಗಿ ನಿರ್ಮಿಸಲಾದ ಕಟ್ಟವನ್ನು ತೆರವುಗೊಳಿಸಿ ವಶಪಡಿಸಿಕೊಂಡು ನಾಮಫಲಕವನ್ನು ಅಳವಡಿಸಲಾಗಿದೆ.
ಒತ್ತುವರಿ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ವಲಯ ಅಧಿಕಾರಿ ನರೇಂದ್ರಬಾಬು, ಸಹಾಯಕ ಅಭಿಯಂತರರಾದ ಮಣಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಡಿ.ಬಿ.ನಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.