ಮೈಸೂರು: ಮನೆ ಯಜಮಾನಿಗೆ ಪ್ರತಿತಿಂಗಳು 2 ಸಾವಿರ ನೀಡುವ ಮಹತ್ವದ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ ಹಣವನ್ನು ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ನಾಡದೇವಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ವೈಯುಕ್ತಿಕ ಹಣದಲ್ಲಿ ಇದನ್ನು ಸಂದಾಯ ಮಾಡಿರುವುದು ವಿಶೇಷ.
ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ಮಾಡುವ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ. ಕೆ ಶಿವಕುಮಾರ್ ಅವರಿಗೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು.
ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಿ ಕೆ ಶಿವಕುಮಾರ್ ಸೂಚಿಸಿದ್ದರು.
ಹಾಗಾಗಿ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ.
59 ತಿಂಗಳ ಅಂದರೆ 1,18,000 ರೂಪಾಯಿ ಹಣವನ್ನ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ.
ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯವಾಗಿದೆ.