ಮೈಸೂರಲ್ಲಿ ಕ್ರೈಮ್ ರೇಟ್ ಕಡಿಮೆಯಾಗಿದೆ: ಪೊಲೀಸ್ ಕಮಿಷನರ್ ರಮೇಶ್ ಬಾನೋತ್

ಮೈಸೂರು: ಮೈಸೂರಿನಲ್ಲಿ ಕ್ರೈಮ್ ರೇಟ್ ಕಡಿಮೆಯಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದರು.

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ  ದೇವಸ್ಥಾನದ ಬಳಿ ಸೋಮವಾರ ಬೆಳಿಗ್ಗೆ  ಪೊಲೀಸ್ ಆಯುಕ್ತರು ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೈಸೂರಿನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ, ಚೈನ್ಸ್ ಸ್ನ್ಯಾಚಿಂಗ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ತಿಳಿಸಿದರು.

ಈ ವರ್ಷದಲ್ಲಿ ನಡೆದಿರುವ ಚೈನ್ಸ್ ಸ್ನ್ಯಾಚಿಂಗ್  ಪ್ರಕರಣಗಳ ಪೈಕಿ ಎಂಟು ಪ್ರಕರಣಗಳನ್ನು ಈಗಾಗಲೇ ಪತ್ತೆಹಚ್ಚಲಾಗಿದೆ. ಉಳಿದ ಪ್ರಕರಣಗಳನ್ನು ಅತಿ ಶೀಘ್ರದಲ್ಲೇ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿಸಿಪಿಗಳಾದ ಮುತ್ತುರಾಜ್, ಶೈಲೇಂದ್ರ, ಜಿಲ್ಲಾಧಿಕಾರಿಗಳಾದ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.