ಬೆಂಗಳೂರಿನಲ್ಲಿ ಮಧ್ಯರಾತ್ರಿ1 ಗಂಟೆವರೆಗೆ ಹೊಸ ವರ್ಷಾಚರಣೆಗೆ ಅವಕಾಶ -ದಯಾನಂದ್

ಬೆಂಗಳೂರು: ಹೊಸ ವರ್ಷಾಚರಣೆಗೆ ನಾಲ್ಕೈದು ದಿನ‌ ಇದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ.

ಹೊಸ ವರ್ಷಾಚರಣೆ ಸಂಬಂಧ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಕ ಮಾರ್ಗಸೂಚಿ ಬಿಡುಗಡೆ ಮಾಡಿದರು.

ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ತೆಗೆದುಕೊಳ್ಳಲಾಗಿದೆ. ಜನಸಂದಣಿ ಇರುವ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ,ಸ್ಟಾರ್ ಹೋಟೆಲ್, ಪಬ್ , ಕ್ಲಬ್​​ಗಳ ಬಳಿ ಬಂದೋಬಸ್ತ್ ಪಾಯಿಂಟ್​ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಬಿಬಿಎಂಪಿ, ಮೆಟ್ರೋ, ಬಿಎಂಟಿಸಿ, ಅಬಕಾರಿ, ಆರೋಗ್ಯ ಇಲಾಖೆ, ಅಗ್ನಿಶಾಮಕ, ಮಾಲಿನ್ಯ ನಿಯಂತ್ರಣ ಮಂಡಳಿ, ಬಿಎಂಆರ್​ಸಿಎಲ್, ಬೆಸ್ಕಾಂ ಜೊತೆಗೆ ಮಾತುಕತೆ ನಡೆಸಿದ್ದೇವೆ.

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕಬ್ಬನ್ ಪಾರ್ಕ್, ಟ್ರಿನಿಟಿ, ಫಿನಿಕ್ಸ್ ಮಾಲ್, ಕ್ಲಬ್​ಗಳ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಮಾಡಲಾಗುತ್ತದೆ, ಮಹಿಳೆಯರ ಸುರಕ್ಷತೆಗಾಗಿ ಸೇಫ್ ಟೀಂ ಐಲ್ಯಾಂಡ್​ಗಳನ್ನಯ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.

ಮಕ್ಕಳು ಕಾಣೆಯಾದರೆ ಕಳುವು ಬಗ್ಗೆ ಮಾಹಿತಿ ನೀಡಲು ಪೊಲೀಸ್ ಕಿಯೋಸ್ಕ್​ಗಳು ಇರಲಿವೆ. ಸೂಕ್ತ ಕಣ್ಗಾವಲು ಪ್ರದೇಶದಲ್ಲಿ ವಾಚ್ ಟವರ್ ಗಳ ನಿರ್ಮಾಣ, ಬೈನಾಕುಲರ್ ಮೂಲಕ ವೀಕ್ಷಣೆ ಮಾಡಲಾಗುತ್ತದೆ.ಅತಿ ಪ್ರಮುಖ‌ ಬಡಾವಣೆಗಳಲ್ಲಿ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ಡ್ರಗ್ಸ್ ಸೇವನೆ ಮಾಡೋಕೆ ಬಿಡುವುದಿಲ್ಲ ಎಂದು ‌ಎಚ್ಚರಿಸಿದ ದಯಸನಂದ್,ಈಗಾಗಲೇ ಪೆಡ್ಲರ್ ಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಮುಖ ಸ್ಥಳದಲ್ಲಿ ಡ್ರೋಣ್ ಕ್ಯಾಮೆರಾಗಳ ಬಳಕೆ ಮಾಡಲಾಗುತ್ತಿದೆ. ನಗರಾದ್ಯಂತ 10 ಸಾವಿರಕ್ಕೂ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಹೋಂ ಗಾರ್ಡ್​ಗಳನ್ನು ಸಹ ನಿಯೋಜನೆ ಮಾಡಲಾಗುತ್ತದೆ ಎಂದು ಹೇಳಿದರು.

ನಗರದ ಭದ್ರತೆಗಾಗಿ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಒಬ್ಬರು ಜಂಟಿ ಪೊಲೀಸ್ ಆಯುಕ್ತರು, 15 ಡಿಸಿಪಿ, 160 ಇನ್​ಸ್ಪೆಕ್ಟರ್, 600 ಸಬ್​ ಇನ್​ಸ್ಪೆಕ್ಟರ್, 600 ಎಎಸ್​ಐ, 1,800 ಹೆಡ್​​ ಕಾನ್​​ಸ್ಟೇಬಲ್ ಮತ್ತು 5,200 ಪೊಲೀಸ್ ಕಾನ್​ಸ್ಟೇಬಲ್ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಡಿ.31 ರಾತ್ರಿ 11 ಗಂಟೆಯಿಂದ ಎಲ್ಲಾ ಫ್ಲೈಓವರ್ ಗಳು ಬಂದ್ ಆಗಲಿದೆ. ರಾತ್ರಿ ಒಂದು ಗಂಟೆವರೆಗೂ ಮಾತ್ರ ಹೊಸ ವರ್ಷ ಆಚರಣೆಗೆ ಅವಕಾಶ ನೀಡಲಾಗಿದೆ.

48 ನಾಕಾಬಂದಿಗಳನ್ನ ಮಾಡಲಾಗಿದೆ, 48 ಕಡೆಗಳಲ್ಲಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ ಎಂದು ಆಯುಕ್ತರು ತಿಳಿಸಿದರು.