ಮೈಸೂರು: ಆಯುರ್ವೇದವು ಭಾರತದ ವೈದ್ಯ ಪದ್ದತಿಯಾಗಿದ್ದು,
ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿ ಹೊಂದಿದೆ,ಇಂದು ವಿಶ್ವಮನ್ನಣೆಯನ್ನು ಪಡೆದುಕೊಂಡಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಆಯುಷ್ ಇಲಾಖೆಯು ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿಪಾಳ್ಯ ಗ್ರಾಮದಲ್ಲಿ ಏರ್ಪಡಿಸಿದ್ದ ಆಯುಷ್ ಸೇವಾ ಗ್ರಾಮ ವಿಶಿಷ್ಠ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಆರ್ಯುವೇದವು ನಮ್ಮ ದೇಹದ ಪಂಚೇಂದ್ರಿಯಗಳನ್ನು ನಿಯಂತ್ರಿಸುತ್ತದೆ.
ಆರ್ಯುವೇದವನ್ನು ನಾವು ಚಿಕಿತ್ಸೆಗಿಂತ ಮುಖ್ಯವಾಗಿ ಬದುಕಿನ ಭಾಗ ಎಂಬುದಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದರು.
ಮುಂದಿನ ಪೀಳಿಗೆಗೆ ಈ ಪದ್ದತಿಯನ್ನು ತಲುಪಿಸುವ ಕಾರ್ಯ ಮಾಡಬೇಕು. ಆರ್ಯುವೇದ ಪದ್ದತಿಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು,ಅದರ ನಿಯಮಗಳನ್ನು ಪಾಲಿಸಬೇಕು ಇದರಿಂದ ಆತ್ಮಸ್ಥೈರ್ಯ ವೃದ್ಧಿಯಾಗಿ ಗುಣಾತ್ಮಕ ಯೋಚನೆ ಮೂಡುತ್ತದೆ ಎಂದು ಹೇಳಿದರು.
ಆಯುರ್ವೇದದ ಮೂಲಕ ಅನೇಕ ರೋಗಗಳನ್ನು ಗುಣಪಡಿಸುವ ಪದ್ಧತಿ ಯುಗ ಯುಗದಿಂದಲೂ ಇದೆ. ಈ ಪದ್ಧತಿ ಮನಸ್ಸು ಮತ್ತು ದೇಹ ಎರಡನ್ನೂ ಗುಣಪಡಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.
ಆಯುರ್ವೇದ ಪದ್ಧತಿ ತಲೆಮಾರುಗಳಿಂದ ಇದ್ದರೂ, ಕೊರೊನಾ ವಕ್ಕರಿಸಿದ ಮೇಲೆ ಸಾಕಷ್ಟು ಜನಪ್ರಿಯವಾಗಿದೆ. ಆದರೆ ಅರಿವು ಮತ್ತು ಜ್ಞಾನದ ಕೊರತೆಯಿಂದ ಆಯುರ್ವೇದದ ಬಗ್ಗೆ ಕೆಲವು ತಪ್ಪುಗ್ರಹಿಕೆಗಳಿವೆ. ಆದ್ದರಿಂದ ಆಯುರ್ವೇದ ಬಗ್ಗೆ ನಾವು ತಿಳಿದುಕೊಳ್ಳಬೇಕು ಈ ನಿಟ್ಟಿನಲ್ಲಿ ಆಯುಷ್ ಇಲಾಖೆ ಕೈಗೊಂಡಿರುವ ಈ ಕಾರ್ಯಕ್ರಮ ಶ್ಲಾಘನೀಯ ಎಂದು ಜಿಟಿಡಿ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ , ಗ್ರಾಮದ ಮುಖಂಡರಾದ ದೇವಯ್ಯ, ಯೋಗೇಶ್, ಬಂಗಾರಪ್ಪ, ರಾಮಣ್ಣ, ಲಕ್ಷ್ಮಯ್ಯ, ದಾಸಯ್ಯ, ಮಲ್ಲಯ್ಯ, ಯಶೋಧ, ಪುಟ್ಟಯ್ಯ, ರಾಮಸ್ವಾಮಿ, ಕೃಷ್ಣಪ್ಪ ಮತ್ತಿತರ ಮುಖಂಡರು ಭಾಗವಹಸಿದ್ದರು.