ಮೈಸೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4.17 ಲಕ್ಷ ಮೌಲ್ಯದ 200 ಮೂಟೆ ಪಡಿತರ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಹೆಬ್ಬಾಳದಲ್ಲಿರುವ ಕೆ.ಎಫ್.ಸಿ.ಐ.ಗೋದಾಮಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಪಡಿತರ ಅಕ್ಕಿ ಸಿದ್ದಲಿಂಗಪುರ ಗ್ರಾಮದ ಬಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದೆ.
KA 09 B 9686 ನೊಂದಣಿ ಸಂಖ್ಯೆಯ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡಲಾಗುತ್ತಿತ್ತು.
ಈ ವೇಳೆ ಪೊಲೀಸರು ದಾಳಿ ನಡೆಸಿದ್ದು, ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿ ಚಾಲಕನನ್ನೂ ಸಹ ವಶಕ್ಕೆ ಪಡೆದಿದ್ದಾರೆ
ವಶಪಡಿಸಿಕೊಂಡಿದ್ದ ಅಕ್ಕಿ,ಲಾರಿ ಹಾಗೂ ಚಾಲಕನನ್ನ ಮೇಟಗಳ್ಳಿ ಪೊಲೀಸರ ವಶಕ್ಕೆ ಸಿಸಿಬಿ ಪೊಲೀಸರು ನೀಡಿದ್ದಾರೆ.
ಸ್ಥಳಕ್ಕೆ ಆಹಾರ ನಿರೀಕ್ಷಕರಾದ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಮೇಟಗಳ್ಳಿ ಠಾಣೆ ಇನ್ಸ್ ಪೆಕ್ಟರ್ ದಿವಾಕರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಶಬರೀಶ್ ಅವರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್,ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಪೂವಯ್ಯ, ಪಿಎಸ್ಐ ಲೇಪಾಕ್ಷ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.