ಹುಣಸೂರು ಪ್ರತ್ಯೇಕ ಜಿಲ್ಲೆಗೆ ಮತ್ತೆ ಹಳ್ಳಿಹಕ್ಕಿ ಆಗ್ರಹ

ಮೈಸೂರು: ಹುಣಸೂರು ತಾಲ್ಲೂಕನ್ನು ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ಮತ್ತೆ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಶ್ವನಾಥ್, ದೇವರಾಜ ಅರಸು ಅವರ ಹುಟ್ಟೂರು ಪ್ರತ್ಯೇಕ ಜಿಲ್ಲೆಯಾದರೆ ಸಾಕಷ್ಟು ಅನುಕೂಲಗಳು ಆಗುತ್ತದೆ ಎಂದು ಹೇಳಿದರು.

ಮೈಸೂರು ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ಒತ್ತಡ ಇದೆ. ತಾಲೂಕು ಕೇಂದ್ರಗಳಿಗೆ ಹೋಗಲು ಕಷ್ಟವಾಗುತ್ತದೆ. ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ.6 ತಾಲೂಕುಗಳಿಗೆ ನಾಲ್ಕು ಜನ ಶಾಸಕರಿದ್ದೇವೆ‌, ಎಲ್ಲಾ ಶಾಸಕರ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಮುಖ್ಯ ಮಂತ್ರಿಗಳ ಜೊತೆಯೂ ಮಾತನಾಡುತ್ತೇನೆ,ಆರು ತಾಲೂಕುಗಳನ್ನ ಸೇರಿಸಿ ಒಂದು ಜಿಲ್ಲೆಯಾಗಲಿ ಎಂದು ವಿಶ್ವನಾಥ್ ಅಭಿಪ್ರಾಯಪಟ್ಟರು.

ಸಿದ್ದರಾಮಯ್ಯ ನಮ್ಮ ಜಿಲ್ಲೆಯವರು,ಸಿಎಂ ಆಗಿದ್ದಾರೆ. ಹೀಗಾಗಿ ದೇವರಾಜ ಅರಸು ಅವರ ಹೆಸರು ಅಮರವಾಗಬೇಕು, ಹುಣಸೂರು ತಾಲೂಕು ಪ್ರತ್ಯೇಕ ಜಿಲ್ಲೆಯಾಗಬೇಕು

ನಾನು‌ ಈ‌ ವಿಚಾರದಲ್ಲಿ ಸಂಘರ್ಷ ಮಾಡುವುದಿಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುತ್ತೇನೆ ಎಂದು ಹೆಚ್.ವಿಶ್ವನಾಥ್ ಹೇಳಿದರು.

ಇದೇ ವೇಳೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿದ‌ ವಿಶ್ವನಾಥ್,ಬಿಜೆಪಿಯವರು ರಾಮನನ್ನ ಲೋಕಸಭಾ ಚುನಾವಣೆ ಚೀಪ್  ಕ್ಯಾಂಪೇನರ್ ಮಾಡಿಕೊಂಡಿದ್ದಾರೆ ಇದು ಸರಿಯಲ್ಲ ರಾಮ ಎಲ್ಲರ ಆಸ್ತಿ ಎಂದು ಹೇಳಿದರು.

ರಾಮಮಂದಿರ ಉದ್ಟಾಟನೆಯಾಗಿದೆ, ಜನರು ಬಹಳ ಸಂತೋಷವಾಗಿದ್ದಾರೆ. ರಾಮ ಭಾರತೀಯರ ಆರಾಧ್ಯದೈವ, ಭಾರತೀಯತ ಅಸ್ಮಿತೆ, ಮೋದಿ 500 ವರ್ಷಗಳ ಸಮಸ್ಯೆಯನ್ನ ಬಗೆಹರಿಸಿದ್ದಾರೆ ಇದು ಸಂತಸದ‌ ವಿಷಯ ಆದರೆ ಜನರ ಕಷ್ಟಗಳಿಗೆ ಮೋದಿ ಈಗಲಾದರೂ ಸ್ಪಂದಿಸಬೇಕು ಎಂದು ಬಿಜೆಪಿಯ ವರನ್ನು ಹೊಗಳಿದಂತೆಯೂ ಪರೋಕ್ಷವಾಗಿ ತೆಗಳಿದಂತೆಯೂ ವಿಶ್ವನಾಥ್ ಮಾತನಾಡಿದರು.

ಚುನಾವಣೆಗೂ ಮುನ್ನ ಪ್ರತಿಯೊಬ್ಬರಿಗೆ 15 ಲಕ್ಷ ಕೊಡುತ್ತೇನೆ ಅಂದಿದ್ರಿ. ಆದಷ್ಟು ಬೇಗ ಹಣವನ್ನ ಹಾಕಿ. ಜನರು ಸಾಕಷ್ಟು ಕಷ್ಟದಲ್ಲಿದ್ದು ಎಲ್ಲಾ ವಸ್ತುಗಳಿಗೆ ಜಿಎಸ್ ಟಿ ಕಟ್ಟುತ್ತಿದ್ದಾರೆ.

ಅತಿ ಹೆಚ್ಚು ಜಿಎಸ್ ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ನೀರವ್ ಮೋದಿ ಅವರಿಂದ ದೇಶಕ್ಕೆ ಲಕ್ಷಾಂತರ ಕೋಟಿ ನಷ್ಟವಾಗಿದೆ, ಅವರನ್ನ ಬಂಧಿಸಿ ಕರೆತರುತ್ತೇನೆ ಅಂದಿದ್ದಿರಿ ಅದು ಸಹ ಸಾಧ್ಯವಾಗಿಲ್ಲ ಎಂದು ತಮ್ಮದೇ‌ಧಾಟಿಯಲ್ಲಿ ಹಳ್ಳಿಹಕ್ಕಿ ಕುಟುಕಿತು.