ಮೈಸೂರು: ನಮ್ಮ ಸರಕಾರ ಚುನಾವಣೆ ಸಂದರ್ಭದಲ್ಲಿ ತನ್ನ ಪ್ರಣಾಳೀಕೆಯಲ್ಲಿ ಘೋಷಿಸಿದ್ದ 5 ಗ್ಯಾರೆಂಟಿಗಳನ್ನು ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಈಡೇರಿಸುವ ಮೂಲಕ ನುಡಿದಂತೆ ನಡೆದ ಸರಕಾರ ಎಂಬುದನ್ನು ಸಾಬೀತುಪಡಿಸಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಸಿ. ಮಹದೇವಪ್ಪ ಹೇಳಿದರು.
ಮೈಸೂರಿನ ಬನ್ನಿಮಂಟಪ ಮೈದಾನದಲ್ಲಿ ಇಂದು ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಸಮರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅನ್ನ ಭಾಗ್ಯ, ಗೃಹಲಕ್ಷ್ಮೀ, ಗೃಹಜೋತಿ, ವಿದ್ಯಾನಿಧಿ ಯೋಫಜನೆಗಳ ಮೂಲಕ ರಾಜ್ಯದ ಕೋಟ್ಯಾಂತರ ಜನರಿಗೆ ಪ್ರಯೋಜನೆಗಳ ಮೂಲಕ ರಾಜ್ಯದ ಕೋಟ್ಯಾಂತರ ಜನರಿಗೆ ಪ್ರಯೋಜನಗಳನ್ನು ಒದಗಿಸಿದೆ ಇದರಿಂದ ಸರಕಾರ ಬಡವರು, ದಲಿತರು, ಹಿಂದುಳಿದವರು, ಹಾಗೂ ಮಹಿಳೆಯರ ಪರ ನಿಂತಿದೆ ಎಂಬುದು ಸಾಬೀತಾಗಿದೆ ಎಂದವರು ತಿಳಿಸಿದರು.
ಸರಕಾ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮೈಸೂರು ಜಿಲ್ಲೆಯ ೆಲ್ಲಾ 9 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದೆ. ಈ ಹಿನ್ನೆಯಲ್ಲಿ ಮುಂಗಾರು ಋತುವಿನಲ್ಲಿ ಹಾನಿ ಆಗಿರುವ ಬೆಳೆಗಳಿಗೆ ಎಸ್ ಡಿ ಆರ್ ಎಫ್ ಹಾಗೂ ಎನ್ ಡಿಆರ್ ಎಫ್ ಮಾರ್ಗ ಸುಚಿ ಪ್ರಕಾರ ಮೊದಲನೆ ಕಂತಾಗಿ ರೂ. 2 ಸಾವಿರ ವರೆಗೆ ಪರಿಹಾರವನ್ನು ವಿತರಿಸಲಾಗುತ್ತಿದೆ. ಮೂದಲು ಮತ್ತು 2ನೇ ಹಂತದಲ್ಲಿ 72,277 ರೈತರುಗಳಿಗೆ ರೂ. 12.81 ಕೋಟಿ ರೂ.ಪರಿಹಾರವನ್ನು ವಿತರಿಸಲಾಗುತ್ತಿದೆ ಎಂದರು.
ಭವ್ಯ ಭಾರತ ನಿರ್ಮಾಣದಲ್ಲಿ ತೊಡಗಿಕೊಂಡಿರುವ ನಾವೆಲ್ಲರೂ ಸಂವಿಧಾನದ ಬೆಳಕಿನಲ್ಲಿ ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗೋಣ ಎಂದು ಸಚಿವರು ಈ ಸಂದರ್ಭ ದಲ್ಲಿ ಹೇಳಿದರು.
ಭಾಷಣಕ್ಕೂ ಮುನ್ನ ಸಚಿವರು ಪೆರೇಡ್ ವಂದನೆ ಸ್ವೀಕರಿಸಿದರು.
ಸಚಿವರ ಭಾಷಣದ ನಂತರ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಇಂದಿನ ಕಾರ್ಯಕ್ರಮದಲ್ಲಿ ತನ್ವಿರ್ ಸೇಠ್, ಎಂಎಲ್ ಸಿ ಮರಿತಿಬ್ಬೇಗೌಡ, ಡಿಸಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್, ಎಸ್ಪಿ ಸೀಮ ಲಾಟ್ಕರ್ ಮತ್ತಿತರರಿದ್ದರು.