ಚಿತ್ರದುರ್ಗ: ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಿತ್ರದುರ್ಗದಲ್ಲಿಂದು ಸಿದ್ದರಾಮಯ್ಯ ಮಾಧ್ಯಮದವ ರೊಂದಿಗೆ ಮಾತನಾಡಿದರು.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ಕಿತ್ತುಹಾಕಿರುವುದಕ್ಕೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ ನಮ್ಮ ದೇಶದ ಬಾವುಟ ಹಾರಿಸಬೇಕು ಎಂದು ಹೇಳಿದರು.
ಶ್ಯಾಮನೂರು ಶಿವಶಂಕರಪ್ಪನವರು ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರೇ ಗೆಲ್ಲಲಿ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮ ದವರ ಪ್ರಶ್ನೆಗೆ,ಅದು ನನಗೆ ಗೊತ್ತಿಲ್ಲ ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ 15 ರಿಂದ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ, ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ,ನಾವೂ ಕೂಡಾ ಚುನಾವಣಾ ಸಮೀಕ್ಷೆ ಮಾಡಿಸಿರುವುದಾಗಿ ಸಿಎಂ ಹೇಳಿದರು.
ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಜಾರಿ ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಇದೇ ವೇಳೆ ಸಿಎಂ ತಿಳಿಸಿದರು.
ಇಂಡಿಯಾ ಒಕ್ಕೂಟದಿಂದ ಹಲವು ಪಕ್ಷಗಳು ಬಿಟ್ಟು ಹೋಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಸೋನಿಯಾ ಗಾಂಧಿ ಯವರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ,ನಾನು ಈ ಬಗ್ಗೆ ಮಾತನಾಡಲು ಹೋಗುವುದಿಲ್ಲ ಎಂದರು ಸಿದ್ದು.
ಜಾತಿವಾರು ಜನಗಣತಿ ವರದಿಯನ್ನು ಸಲ್ಲಿಸಿದರೆ ಸ್ವೀಕಾರ ಮಾಡುತ್ತೇನೆ, ವರದಿಯಲ್ಲಿ ಏನಿದೆ ಎಂದು ಸಲ್ಲಿಕೆಯಾದ ಮೇಲೆ ಚರ್ಚೆ ಮಾಡುವುದಾಗಿ ತಿಳಿಸಿದರು.