ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನನ್ನ ಹೆಸರಿನಲ್ಲೇ ರಾಮ ಇದ್ದಾನೆ, ನಾನೂ ಹಿಂದು ಎಂದು ಹೇಳಿಕೊಳ್ಳುವ ಯಾವ ನೈತಿಕತೆಯೂ ನಿಮಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆರಗೋಡು ಪಟ್ಟಣದಲ್ಲಿ ಹಿಂದೂಗಳ ಭಾರೀ ವಿರೋಧದ ನಡುವೆಯೂ ಪೊಲೀಸರು ಲಾಠಿಚಾರ್ಜ್ ನಡೆಸಿ ಹನುಮಧ್ವಜ ತೆರವು ಮಾಡಿಸಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಾ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಒಂದು ಹನುಮಧ್ವಜ ತೆಗೆದರೆ ಹಿಂದುಗಳು ಮನೆಮನೆಯಲ್ಲೂ ಹನುಮಧ್ವಜ ಹಾರಿಸುವಂತೆ ವಿಡಿಯೋ ಮೂಲಕ ವಿಜಯೇಂದ್ರ ಕರೆ ನೀಡಿದ್ದಾರೆ.
ಇದೀಗ ಈ ಕರೆಗೆ ಓಗೊಟ್ಟು ಮನೆ ಮನೆಯಲ್ಲೂ ಹನುಮಧ್ವಜ ಹಾರಿಸುವ ಮೂಲಕ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ.