ಪಾಕಿಸ್ತಾನದ ಐಎಸ್ಐ ಏಜೆಂಟ್ ಅರೆಸ್ಟ್

ಲಕ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಮಾಸ್ಕೋದ ಭಾರತೀಯ ರಾಯಭಾರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪಾಕಿಸ್ತಾನದ ಐಎಸ್ಐ ಏಜೆಂಟ್ ನನ್ನು ಬಂಧಿಸಿದೆ.

ಸತ್ಯೇಂದ್ರ ಸಿವಾಲ್ ಅವರನ್ನು‌ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.

2021 ರಿಂದ ರಾಯಭಾರ ಕಚೇರಿಯಲ್ಲಿ ನೇಮಿಸಲಾಗಿತ್ತು. ಹಾಪುರ್ ಮೂಲದವರಾದ ಅವರು ವಿದೇಶಾಂಗ ಸಚಿವಾಲಯದಲ್ಲಿ ಎಂಟಿಎಸ್ (ಮಲ್ಟಿ-ಟಾಸ್ಕಿಂಗ್, ಸ್ಟಾಫ್) ಆಗಿ ಕೆಲಸ ಮಾಡುತ್ತಿದ್ದರು.

ಪ್ರಸ್ತುತ ಮಾಸ್ಕೋದಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರೆಂದು ತಿಳಿಸಲಾಗಿದೆ.

ಮಾಹಿತಿಯ ಆಧಾರದ ಮೇಲೆ ಯುಪಿ ಎಟಿಎಸ್ ಸಿವಾಲ್ ಅವರನ್ನು ವಿಚಾರಣೆ ನಡೆಸಿತ್ತು. ಅವರು ಆರಂಭದಲ್ಲಿ ಗೊಂದಲಕಾರಿ ಉತ್ತರಗಳನ್ನು ನೀಡಿದರು, ನಂತರ ಅವನು ಬೇಹುಗಾರಿಕೆಯನ್ನು ಒಪ್ಪಿಕೊಂಡಾಗ ಮೀರತ್ ನಲ್ಲಿ ಬಂಧಿಸಲಾಗಿದೆ.

ವಿಚಾರಣೆಯ ಸಮಯದಲ್ಲಿ ಸತ್ಯೇಂದ್ರ ಸಿವಾಲ್ ಅವರು ಭಾರತೀಯ ಸೇನೆ ಮತ್ತು ಅದರ ದೈನಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಹಣದ ಆಮಿಷ ಒಡ್ಡುತ್ತಿದ್ದರು ಎಂದು ಬಹಿರಂಗವಾಗಿದೆ.

ಭಾರತೀಯ ರಾಯಭಾರ ಕಚೇರಿ, ರಕ್ಷಣಾ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಬಗ್ಗೆ ನಿರ್ಣಾಯಕ ಮತ್ತು ಗೌಪ್ಯ ಮಾಹಿತಿಯನ್ನು ಸಿವಾಲ್ ಐಎಸ್ಐ ಹ್ಯಾಂಡ್ಲರ್ ಗಳಿಗೆ ರವಾನಿಸುತ್ತಿದ್ದರು ಎಂಬುದು ಗೊತ್ತಾಗಿದೆ.